ನುಡಿದಂತೆಯೇ ನಡೆಯುವ ಪಕ್ಷ ಕಾಂಗ್ರೆಸ್: ರಾಘವೇಂದ್ರ ಹಿಟ್ನಾಳ

KannadaprabhaNewsNetwork |  
Published : Apr 24, 2024, 02:23 AM IST
23ಕೆಪಿಎಲ್28 ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಅನುಶ್ರೀ ಮಡಿವಾಳರ್ ನಿವಾಸಕ್ಕೆ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ, ಸಾಂತ್ವಾನ ಹೇಳಿದರು. | Kannada Prabha

ಸಾರಾಂಶ

ರಾಜ್ಯ ಮತ್ತು ದೇಶದಲ್ಲಿ ನುಡಿದಂತೆ ನಡೆಯುವ ಯಾವುದಾದರೂ ಪಕ್ಷ ಇದ್ದರೇ ಅದು ಕಾಂಗ್ರೆಸ್.

- ಶಾಸಕರ ನೇತೃತ್ವದಲ್ಲಿ ಹಲವು ಮುಖಂಡರು ಕಾಂಗ್ರಸ್ ಸೇರ್ಪಡೆಕನ್ನಡಪ್ರಭ ವಾರ್ತೆ ಕೊಪ್ಪಳ

ರಾಜ್ಯ ಮತ್ತು ದೇಶದಲ್ಲಿ ನುಡಿದಂತೆ ನಡೆಯುವ ಯಾವುದಾದರೂ ಪಕ್ಷ ಇದ್ದರೇ ಅದು ಕಾಂಗ್ರೆಸ್ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಗಬ್ಬೂರು ಗ್ರಾಮದಲ್ಲಿ 60ಕ್ಕೂ ಅಧಿಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದವರನ್ನು ಸ್ವಾಗತಿಸಿ ಅವರು ಮಾತನಾಡಿದರು.

ಈಗಾಗಲೇ ರಾಜ್ಯ ವಿಧಾನಸಭೆಯ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿ ರಾಜ್ಯದ ಪ್ರತಿ ಜನತೆಗೆ ತಲುಪಿಸುವ ಕಾರ್ಯ ಮಾಡಿದ್ದೇವೆ. ರಾಜ್ಯದಲ್ಲಿ ಜನರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕೂಡ ನಮ್ಮ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ರಚನೆ ಆದ ತಕ್ಷಣದಲ್ಲಿಯೇ ಈ ಯೋಜನೆಗಳನ್ನು ಜಾರಿ ಮಾಡಿ ಅಲ್ಲೂ ಕೂಡ ನುಡಿದಂತೆ ನಡೆಯುತ್ತೇವೆ. ದೇಶದ ಜನತೆ ಬದಲಾವಣೆ ಬಯಸಿದ್ದು ನಿಶ್ಚಿತವಾಗಿ ಕೇಂದ್ರದಲ್ಲಿ ಇಂಡಿಯಾ ನೇತೃತ್ವದಲ್ಲಿ ಸರ್ಕಾರ ರಚನೆ ಆಗಲಿದೆ ಎಂದರು.

ನಂತರ ಕಾಂಗ್ರೆಸ್ ಮುಖಂಡ ಅಮರೇಶ ಕರಡಿ ಮಾತನಾಡಿ, ಕೊಪ್ಪಳ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ ಗೆಲವು ನಿಶ್ಚಿತ. ಸುಮಾರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಶೀಲರಾಗಲಿದ್ದಾರೆ ಎಂದರು.

ತಾಳಕನಕಪುರ ಗ್ರಾಮದ 20ಕ್ಕೂ ಅಧಿಕ ಮುಖಂಡರು ಬಿಜೆಪಿ ತೊರೆದು ಶಾಸಕ ಹಿಟ್ನಾಳ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಸಾಂತ್ವನ:

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಅನುಶ್ರೀ ಮಡಿವಾಳರ ನಿವಾಸಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಕೊಪ್ಪಳ ಜಿಲ್ಲಾ ಎಸ್‌ಪಿ ಅವರಿಗೆ ಕರೆ ಮಾಡಿ ಈ ಕೃತ್ಯದಲ್ಲಿ ಭಾಗಿ ಆದ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಈ ವೇಳೆ ಪ್ರಸನ್ನ ಗಡಾದ್, ಅಮರೇಶ್ ಉಪಲಾಪುರ ಉಪಸ್ಥಿತರಿದ್ದರು.

ಈ ಸಂಧರ್ಭ ಕಾಂಗ್ರೆಸ್ ಮುಖಂಡರಾದ ಅಮರೇಶ ಕರಡಿ, ಮಂಜುನಾಥ್ ಹಂದ್ರಾಳ, ಅನ್ನಪ್ಪ ಪೂಜಾರ, ಬಸವರಾಜ್ ಭೋವಿ, ದೇವಪ್ಪ ಕುರಿ, ರಮೇಶ್ ಕಂಬಳಿ, ಮಂಜುನಾಥ್ ಗೌಡ, ಅಲಿಸಾಬ್, ಆನಂದ ಕಿನ್ನಾಳ, ಕರಿಯಪ್ಪ ಕಂಬಳಿ, ರಮೇಶ್ ಹಳ್ಳಿ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ