ಸವಣೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನರಿಗೆ ಪಂಚ ಗ್ಯಾರಂಟಿಗಳನ್ನು ನೀಡಿದೆ. ಅದರಂತೆ ಕೇಂದ್ರಕ್ಕೆ ರಾಜ್ಯದಿಂದ ಸಾವಿರಾರು ಕೋಟಿ ರು. ಜಿಎಸ್‌ಟಿ ತೆರಿಗೆ ಹೋಗುತ್ತಿದೆ. ಅದಕ್ಕೆ ಪೂರಕವಾಗಿ ಉತ್ತರ ಭಾರತದ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಉಚಿತ ರೈಲ್ವೆ ಪ್ರಯಾಣವನ್ನು ಘೋಷಣೆ ಮಾಡುತ್ತಿಲ್ಲ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಟೀಕಿಸಿದರು.ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಸೋಮವಾರ ತಾಲೂಕು ಆಡಳಿತ, ತಾಪಂ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಪ್ರಜಾ ಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅನಾದಿ ಕಾಲದಿಂದಲೂ ಭಾರತದಲ್ಲಿ ತಾಯಂದಿಯರಿಗೆ ಇರುವಷ್ಟು ಗೌರವ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಅದರಂತೆ ಸ್ತ್ರೀಯರನ್ನು ಗೌರವಿಸುವ ಪಕ್ಷ ಕಾಂಗ್ರೆಸ್ ಎಂದರು.
ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ ಮಾತನಾಡಿ, ಈ ಹಿಂದಿನ ಸರ್ಕಾರಗಳು ಯಾವುದೇ ಜನಪರ ಕಾರ್ಯಕ್ರಮಗಳನ್ನು ನೀಡಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಭಿವೃದ್ಧಿಯ ಪರ್ವವನ್ನು ಆರಂಭಿಸಿದ್ದಾರೆ. ಹೆಸ್ಕಾಂನಿಂದ 38 ಸಾವಿರ ರೈತರಿಗೆ ಉಚಿತ ಟಿಸಿ ನೀಡಲು ಮುಂದಾಗಿದ್ದೇವೆ. ಮುಂಬರುವ ದಿನಗಳಲ್ಲಿ 50 ಸಾವಿರ ಟಿಸಿ ನೀಡಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ ವಹಿಸಿದ್ದರು. ತಾಪಂ ಇಒ ಬಿ.ಎಸ್. ಶಿಡೇನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಭಿರ ಆಯೋಜಿಸಲಾಗಿತ್ತು.
ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಕೆಡಿಪಿ ಸದಸ್ಯ ರವಿ ಕರಿಗಾರ, ಗ್ಯಾರಂಟಿ ಸದಸ್ಯರಾದ ಗುರಪ್ಪ ಅಕ್ಕಿ, ಚಂದ್ರಶೇಖರ ಹಟ್ಟಿ, ನೂರಅಹ್ಮದ ಮತ್ತೆಸಾಬನವರ, ಪರಶುರಾಮ ಜುಂಬಣ್ಣನವರ, ಹನುಮಂತಪ್ಪ ಹಳ್ಳಿ, ಇಬ್ರಾಹಿಂಸಾಬ ಕರ್ಜಗಿ, ಪುಟ್ಟಪ್ಪ ಮರಗಿ, ಜ್ಯೋತಿಕಿರಣ ಕುಲಕರ್ಣಿ, ಹನುಮಂತಗೌಡ ಉಳ್ಳಾಗಡ್ಡಿ, ಅಶೋಕ ನೆಲ್ಲೂರ, ನಾಗಪ್ಪ ತಿಮ್ಮಾಪೂರ, ರಮಾಕಾಂತ ಶೆಂಡಿಗೆ, ಶಂಕರ ಲಮಾಣಿ, ಗಿರೀಶ ತಳವಾರ ಇತರರು ಇದ್ದರು.