ಕಾಂಗ್ರೆಸ್ ಪಾಪಿಷ್ಟ ಸರ್ಕಾರ

KannadaprabhaNewsNetwork |  
Published : Apr 08, 2024, 01:03 AM IST
ಅಪಪ್ರಚಾರಕ್ಕೆ ನತಲೆ ಕಡೆಸಿಕೊಳ್ಳಬೇಡಿ  ಇದು ನನ್ನ ಕೊನೆ ಚುನಾವಣೆ ಇದೊಂದು ಬಾರಿ ನನ್ನ ಗೆಲ್ಲಿಸಿ | Kannada Prabha

ಸಾರಾಂಶ

ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ. ಹಾಗಾದರೇ ಜಲ ಜೀವನ್ ಮಿಷನ್ ಯೋಜನೆಯಿಂದ ಕುಡಿವ ನೀರು ಸೇರಿದಂತೆ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಯಾರು? ಎಂದು ಪ್ರಶ್ನಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ. ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ. ಮಂತ್ರಿ ಸ್ಥಾನ ನೀಡಿಲ್ಲ. ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡದೇ ಸಮಾಜವನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಿಎಂ, ಡಿಸಿಎಂ ಮುಂದೆ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ. ಬಂಜಾರ ಸಮಾಜವನ್ನು ಜಿಗಜಿಣಗಿ ಅವರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಜಿಗಜಿಣಗಿ ಅವರ ವ್ಯಕ್ತಿತ್ವ ಶ್ಲಾಘಿಸುವಂತಹದ್ದು, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಮಾತನಾಡಿ, ನಾವೆಲ್ಲರೂ ದೇಶಭಕ್ತರು. ದೇಶವನ್ನು ಉಳಿಸಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. 65 ವರ್ಷ ಕಾಂಗ್ರೆಸ್ ಆಡಳಿತದಿಂದ ದೇಶ ಅಧೋಗತಿಗೆ ಇಳಿದಿತ್ತು. 10 ವರ್ಷಗಳಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗಿದೆ. ಮೋದಿ ಪ್ರಧಾನಿಯಾದ ನಂತರ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿಶ್ವದಲ್ಲಿ ಭಾರತ ಪ್ರಜ್ವಲಿಸಲು ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು. ಜಿಗಜಿಣಗಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಪ್ರಭುಗೌಡ ದೇಸಾಯಿ, ಮಲಕೇಂದ್ರಗೌಡ ಪಾಟೀಲ, ಹೇಮರೆಡ್ಡಿ ಮೇಟಿ ಮಾತನಾಡಿರು. ಮಂಡಲ ಅಧ್ಯಕ್ಷ ಜಗದೀಶ ಪಂಪನವರ, ಶಂಕರಗೌಡ ಶಿವಣಗಿ, ಭೀಮನಗೌಡ ಕೊಡಗಾನೂರ, ಮಹಾಂತೇಶ ಪಟ್ಟಣದ, ಸಿದ್ದು ಬುಳ್ಳಾ, ಸಾಬು ಮಾಶ್ಯಾಳ, ಅರವಿಂದ ಕಾಶೀನಕುಂಟಿ, ಲಕ್ಷ್ಮಣ ಬಿಜ್ಜೂರ ಸೇರಿದಂತೆ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ