ಕಾಂಗ್ರೆಸ್‌ ಜನಮನ್ನಣೆ ಗಳಿಸುತ್ತಿದೆ-ಶಾಸಕ ಬಸವರಾಜ ಶಿವಣ್ಣನವರ

KannadaprabhaNewsNetwork |  
Published : Oct 13, 2025, 02:03 AM IST
ಮ | Kannada Prabha

ಸಾರಾಂಶ

ಇನ್ನಾರನ್ನೋ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಆದರೆ ಎಲ್ಲ ವರ್ಗದ ಬಡವರ ಕೂಗನ್ನು ಆಲಿಸಲು ಕಟಿಬದ್ಧವಾಗಿದ್ದೇವೆ, ರಾಜ್ಯ ಸರ್ಕಾರ ಟೇಕಾಫ್ ಅಗಿದೆ ಭಯಪಡುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಕಾರಣಕ್ಕಾಗಿಯೇ ಕಾಂಗ್ರೆಸ್ ಜನಮನ್ನಣೆ ಗಳಿಸುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ: ಇನ್ನಾರನ್ನೋ ಮೆಚ್ಚಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಆದರೆ ಎಲ್ಲ ವರ್ಗದ ಬಡವರ ಕೂಗನ್ನು ಆಲಿಸಲು ಕಟಿಬದ್ಧವಾಗಿದ್ದೇವೆ, ರಾಜ್ಯ ಸರ್ಕಾರ ಟೇಕಾಫ್ ಅಗಿದೆ ಭಯಪಡುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಕಾರಣಕ್ಕಾಗಿಯೇ ಕಾಂಗ್ರೆಸ್ ಜನಮನ್ನಣೆ ಗಳಿಸುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ತಾಲೂಕಿನ ಮಲ್ಲೂರಿನಲ್ಲಿ 1.14 ಕೋಟಿ ರು.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಿರುವ ಬಹುತೇಕ ಪಕ್ಷಗಳು ಹೇಳುವುದೇ ಒಂದು ಮಾಡುವುದೇ ಇನ್ನೊಂದು, ಅತ್ಯಂತ ಜನಪರವಾಗಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿರುವ ವಿಪಕ್ಷಗಳು ಅವುಗಳ ಜೊತೆಗೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡುವುದಿಲ್ಲ ಏಕೆ? ಎಂದು ಪ್ರಶ್ನಿಸಿದರು.

ಜನರ ಆತಂಕಪಡುವ ಅಗತ್ಯವಿಲ್ಲ: ಕ್ಷೇತ್ರದ ಯಾವುದೇ ಭಾಗಕ್ಕೂ ಅನುದಾನದ ಕೊರತೆಯಾಗದಂತೆ ಹಂಚಿಕೆ ಮಾಡುವ ಮೂಲಕ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ ಎನ್ನವ ಮೂಲಕ ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುವ ವಿಪಕ್ಷಗಳ ಕಾರ್ಯತಂತ್ರದ ಮುಂದುವರಿದ ಭಾಗವಾಗಿದೆ ಎಂದರು.

ನಿಮ್ಮನ್ನು ಸಂಪರ್ಕಿಸಲು ಕಾಲಾವಕಾಶ ಕೊಡಿ: ಬಹಳಷ್ಟು ಜನರು ಅನುದಾನಕ್ಕಾಗಿ ಅಲೆಯುತ್ತಿದ್ದಾರೆ ಎಂಬುದು ವಾಸ್ತವಕ್ಕೆ ದೂರವಾದ ಸಂಗತಿ, ನಾನೇ ಖುದ್ದಾಗಿ ಮತಕ್ಷೇತ್ರದಲ್ಲಿ ಸಂಚರಿಸಿ ಅಗತ್ಯವಿರುವ ಅನುದಾನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಅಲ್ಲಿಯವರೆಗೂ ಸಾರ್ವಜನಿಕರು ತಮ್ಮನ್ನು ಸಂಪರ್ಕಿಸಲು ತಾಳ್ಮೆ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕಾಧ್ಯಕ್ಷ ದಾನಪ್ಪ ಚೂರಿ, ಗ್ರಾಪಂ ಅಧ್ಯಕ್ಷ ಪ್ರಕಾಶ ಕುಲಕರ್ಣಿ, ಸದಸ್ಯ ವಿಠಲ ಜಾಧವ, ಮಹ್ಮದಲಿ ಪಟೇಲ, ಬಡೇಸಾಬ್ ನದಾಫ್, ತಾಪಂ.ಇಓ ಜೆ.ವಿ. ಚಿಲ್ಲೂರಮಠ, ಡಾ. ಹಿರೇಮಠ, ಮೂಕಜ್ಜ ಕಲ್ಯಾಣಮಠ, ಕೆ.ಎಂ. ಮಲ್ಲಿಕಾರ್ಜುನ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ಆರೆಸ್ಸೆಸ್‌ ಬೆಳವಣಿಗೆ ಕೆಲ ಶಕ್ತಿ, ಸಂಘಟನೆಗಳಿಗೆ ಸಹಿಸಲಾಗ್ತಿಲ್ಲ: ಅರುಣಕುಮಾರ