ಕಾಂಗ್ರೆಸ್ ಮಹಿಳಾ ವಿರೋಧಿಯಲ್ಲ, ಬಿಜೆಪಿಯದ್ದು ಕೇವಲ ಅಪಪ್ರಚಾರ: ಸ್ವಾತಿ ಮಳಗಿ

KannadaprabhaNewsNetwork |  
Published : Apr 30, 2026, 02:00 AM IST
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.  | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ಯಾವತ್ತೂ ಮಹಿಳಾ ವಿರೋಧಿಯಲ್ಲ. ಆದರೆ, ಬಿಜೆಪಿ ಮಹಿಳೆಯರ ಮತ ಕಬಳಿಸುವ ಹುನ್ನಾರದಿಂದ ಅಪಪ್ರಚಾರ ಮಾಡುತ್ತಿದೆ ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಸ್ವಾತಿ ಮಳಗಿ ಆರೋಪಿಸಿದರು.

ಗದಗ: ಕಾಂಗ್ರೆಸ್ ಪಕ್ಷ ಯಾವತ್ತೂ ಮಹಿಳಾ ವಿರೋಧಿಯಲ್ಲ. ಆದರೆ, ಬಿಜೆಪಿ ಮಹಿಳೆಯರ ಮತ ಕಬಳಿಸುವ ಹುನ್ನಾರದಿಂದ ಅಪಪ್ರಚಾರ ಮಾಡುತ್ತಿದೆ ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಸ್ವಾತಿ ಮಳಗಿ ಆರೋಪಿಸಿದರು. ಗದಗ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಕೇಂದ್ರದ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಜಾರಿಗೆ ತರಲು ಸಂಚು ರೂಪಿಸಿತ್ತು. ಆದರೆ, ಅದು ಈಗ ವಿಫಲವಾಗಿದೆ. 2023ರಲ್ಲೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿರುವಾಗ, ಈಗ ಮತ್ತೆ ವಿಶೇಷ ಅಧಿವೇಶನ ಕರೆಯುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರಕ್ಕೆ ಮಹಿಳೆಯರ ಮೇಲೆ ನಿಜವಾದ ಕಾಳಜಿ ಇದ್ದರೆ ಲೋಕಸಭೆಯ 543 ಸ್ಥಾನಗಳಲ್ಲಿ ತಕ್ಷಣ ಮೀಸಲಾತಿ ನೀಡಲಿ. ಬಿಹಾರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡಲಾಗಿದೆ. ಅಸಲಿಗೆ ಮಹಿಳಾ ಮೀಸಲಾತಿಯನ್ನು ಮೊದಲ ಬಾರಿಗೆ ಜಾರಿಗೆ ತಂದಿದ್ದೇ ಕಾಂಗ್ರೆಸ್. ಮಹಿಳೆಯರು ಕೇವಲ ಮತ ಹಾಕುವುದಕ್ಕೆ ಸೀಮಿತವಾಗಬಾರದು. ಅವರಿಗೆ ರಾಜಕೀಯ ಸ್ಥಾನಮಾನ ಸಿಗಬೇಕು ಎನ್ನುವುದು ಕಾಂಗ್ರೆಸ್ ಆಶಯ. ಆದರೆ, ಬಿಜೆಪಿ ಮಹಿಳೆಯರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುವ ದುರುದ್ದೇಶ ಹೊಂದಿದೆ ಎಂದು ಆರೋಪಿಸಿದರು.

ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಕನಿಷ್ಠ 8 ರಿಂದ 9 ವರ್ಷಗಳು ಬೇಕಾಗುತ್ತದೆ. ಅಲ್ಲಿ ವರೆಗೆ ಕಾಯುವ ಬದಲು 2023ರ ಬಿಲ್ ಪ್ರಕಾರ ಅಥವಾ ಈಗಿರುವ ಸ್ಥಾನಗಳಲ್ಲೇ ಮೀಸಲಾತಿ ಘೋಷಿಸಲಿ. ಎಲ್ಲಕ್ಕಿಂತ ಮೊದಲು ಜಾತಿ ಗಣತಿ ಮಾಡಲಿ. ಅದರ ವರದಿ ಆಧರಿಸಿ ಮೀಸಲಾತಿ ಹಂಚಿಕೆಯ ಬಗ್ಗೆ ಚರ್ಚಿಸಲಿ. ಜಾತಿ ಗಣತಿ ಮಾಡದೇ ಮೀಸಲಾತಿ ಜಾರಿಗೊಳಿಸುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ ಮತ್ತು ಅವರು ಸಂತಸದಲ್ಲಿದ್ದಾರೆ. ಬಿಜೆಪಿ ಮಹಿಳೆಯರ ಮತಕ್ಕಾಗಿ ನಡೆಸಿದ ಕುತಂತ್ರಗಳು ಈಗ ವಿಫಲವಾಗಿವೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ರುದ್ರಮ್ಮ ಕೆರಕಲಮಟ್ಟಿ, ಜಯಕ್ಕ ಕಳ್ಳಿ, ಸುರೇಖಾ, ನಾಜಬೇಗಂ ಯಲೆಗಾರ, ದಾನೇಶ್ವರಿ ಭಜಂತ್ರಿ, ಉಮಾ ದ್ಯಾವನೂರ, ಶೋಭಾ ದೇಸಳ್ಳಿ, ವೀಣಾ ಕಟ್ನಳ್ಳಿ ಉಪಸ್ಥಿತರಿದ್ದರು.

ಬಿಜೆಪಿ ಮಹಿಳಾ ವಿರೋಧಿ ಸರ್ಕಾರವಾಗಿದೆ. ಕಾಂಗ್ರೆಸ್ ರಾಜೀವ್ ಗಾಂಧಿ ಅವರ ಕಾಲದಲ್ಲೇ ಮಹಿಳೆಯರಿಗೆ ವಿಶೇಷ ಮೀಸಲಾತಿ ನೀಡುವ ಮೂಲಕ ಅವರ ಏಳಿಗೆಗೆ ಶ್ರಮಿಸಿದೆ. ಪಂಚ ಗ್ಯಾರಂಟಿಗಳ ಮೂಲಕ ಇಂದು ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷೆ ನೀಲಮ್ಮ ಬೋಳನವರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಗಾರಿಕಾ ವಸ್ತು ಪ್ರದರ್ಶನ ಇನ್‌ಕಾಮೆಕ್ಸ್‌ಗೆ ತೆರೆ
ನಗರಸಭೆ ರಾಜಕೀಯ ಹೈಡ್ರಾಮಾ: ಬಿಜೆಪಿಯ ಮೂವರು ಸದಸ್ಯರ ಅನರ್ಹತೆ ರದ್ದು