ಜಾತಿ ಜಾತಿಗಳ ಮಧ್ಯೆ ವೀಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್

KannadaprabhaNewsNetwork |  
Published : May 04, 2024, 12:37 AM IST
3-ಎಂಎಸ್ಕೆ-1 : | Kannada Prabha

ಸಾರಾಂಶ

ಮಸ್ಕಿ ಪಟ್ಟಣದ ರಥಬೀದಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಪರವಾಗಿ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಲೋಕಸಭೆ ಚುನಾವಣೆ ದೇಶದ ಭವಿಷತ್ತಿನ ಚುನಾವಣೆಯಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಅಗ್ರಸ್ಥಾನದಲ್ಲಿ ಮುಂದುವರಿಯಬೇಕಾದರೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಟ್ಟಣದ ರಥಬೀದಿಯಲ್ಲಿ ಶುಕ್ರವಾರ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಪರವಾಗಿ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿ ಮಾತನಾಡಿ, ಕಾಂಗ್ರೆಸ್ ಪಕ್ಷ ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸದಲ್ಲಿ ನಿರತವಾಗಿದೆ. ಬರಗಾಲ ಆವರಿಸಿದ್ದರೂ ರೈತರ ನೆರವಿಗೆ ಧಾವಿಸದೆ ಕೇಂದ್ರದ ಮೇಲೆ ಬೊಟ್ಟು ತೊರಿಸುತ್ತ ಪಲಾಯನ ಮಾಡುತ್ತಿದೆ ಆರೋಪಿಸಿದರು.

ಕೊಪ್ಪೊಳ ಲೋಕಸಭಾ ಅಭ್ಯರ್ಥಿ ಬಸವರಾಜ ಕ್ಯಾವಟರ್ ಮಾತನಾಡಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಸಚಿವ ಹಾಲಪ್ಪ ಆಚಾರ, ಬಸವಂತರಾಯ ಕುರಿ ಮಾತನಾಡಿದರು. ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ಸಿಂಧನೂರು ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಎಂಎಲ್ಸಿ ಹೇಮಲತಾ ನಾಯಕ, ಸಿ.ವಿ.ಚಂದ್ರಶೇಖರ, ಅಮರೇಗೌಡ ವಿರುಪಾಪುರ, ಶರಣಪ್ಪ ಮೇಟಿ, ಶರಣು ತಳ್ಳಿಕೇರಿ, ಗಿರಿಗೌಡ, ಸಿದ್ದಣ್ಣ ಹೂವಿನಬಾವಿ, ಮಲ್ಲಪ್ಪ ಅಂಕುಶದೊಡ್ಡಿ, ಡಾ.ಬಿ.ಎಚ್.ದಿವಟರ್, ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ದೇಶಮುಖ, ಜೆಡಿಎಸ್ ಮುಖಂಡ ರಾಘವೇಂದ್ರ ನಾಯಕ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ