ಬಡವರ ಸೇವೆ ಮಾಡಿದ ಏಕೈಕ ಪಕ್ಷ ಕಾಂಗ್ರೆಸ್‌: ಟಿ.ತಿಪ್ಪೇಸ್ವಾಮಿ

KannadaprabhaNewsNetwork |  
Published : Dec 29, 2024, 01:17 AM IST
ಪೋಟೋ೨೮ಸಿಎಲ್‌ಕೆ೧ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಚಳ್ಳಕೆರೆ ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆ ನಡೆಸಿದರು.  | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ಇಂದಿಗೂ ಸಹ ಜನರ ಸೇವೆಯಲ್ಲಿ ತೊಡಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಸಂದರ್ಭದಲ್ಲೂ ಪಕ್ಷದ ಗೌವರ, ಘನತೆಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಹಿರಿಯ ದುರೀಣ ಟಿ.ತಿಪ್ಪೇಸ್ವಾಮಿ ತಿಳಿಸಿದರು. ಚಳ್ಳಕೆರೆಯಲ್ಲಿ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಕ್ಷದ ಸಂಸ್ಥಾಪನ ದಿನಾಚರಣೆ

ಚಳ್ಳಕೆರೆ: ೨೮ ದೇಶದ ಇತಿಹಾಸದಲ್ಲಿ ೧೪೦ ವರ್ಷಗಳ ಕಾಲ ಜನರಿಗೆ ಸ್ಪಂದಿಸಿದ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್. ಸ್ವಾತಂತ್ರ್ಯ ಪಡೆದ ನಂತರ ದೇಶದ ವಿವಿಧ ರಾಜ್ಯಗಳಲ್ಲಿ ಹಾಗೂ ಕೇಂದ್ರದಲ್ಲಿ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಇಂದಿಗೂ ಸಹ ಜನರ ಸೇವೆಯಲ್ಲಿ ತೊಡಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಸಂದರ್ಭದಲ್ಲೂ ಪಕ್ಷದ ಗೌವರ, ಘನತೆಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಹಿರಿಯ ದುರೀಣ ಟಿ.ತಿಪ್ಪೇಸ್ವಾಮಿ ತಿಳಿಸಿದರು.

ನಗರದ ಶಾಸಕರ ಭವನದಲ್ಲಿ ಶನಿವಾರ ಚಳ್ಳಕೆರೆ ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟçದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಲವಾರು ಪಕ್ಷಗಳು ಪೈಪೋಟಿ ಒಡ್ಡಿದರೂ ಬಹುತೇಕ ದೇಶದಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಕೀರ್ತಿ ನಮ್ಮ ಪಕ್ಷದ್ದು. ಆದರೆ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರ ಬೇರೆ ಪಕ್ಷಗಳ ಸಹಕಾರದೊಂದಿಗೆ ಅಧಿಕಾರ ನಡೆಸುತ್ತಿದೆ. ಬಡ ಜನರ ನೋವಿಗೆ ಸ್ಪಂದಿಸುವ ಯಾವುದೇ ಕಾರ್ಯಕ್ರಮ ಕೇಂದ್ರದಿಂದ ಇದುವರೆಗೂ ಜಾರಿಯಾಗಿಲ್ಲವೆಂದರು.

ಹಿರಿಯ ಮುಖಂಡ ಟಿ.ಪ್ರಭುದೇವ್ ಮಾತನಾಡಿ, ಕಳೆದ ವರ್ಷ ರಾಜ್ಯದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ನಿರೀಕ್ಷೆಗೂ ಮೀರಿ ಉತ್ತಮ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿಗಳನ್ನು ಬೇರೆ, ಬೇರೆ ಪಕ್ಷಗಳ ಸರ್ಕಾರಗಳು ಅನುಸರಿಸುವಂತಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮಭರಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ವೀರಭದ್ರಪ್ಪ, ಜಿ.ಟಿ.ಶಶಿಧರ, ಮಹಿಳಾ ಘಟಕದ ಅಧ್ಯಕ್ಷೆ ಗೀತಾಬಾಯಿ, ಬಿ.ಎಂ.ಭಾಗ್ಯಮ್ಮ, ನಾಮನಿರ್ದೇಶನ ಸದಸ್ಯರಾದ ಬಡಗಿಪಾಪಣ್ಣ, ಅನ್ವರ್‌ಮಾಸ್ಟರ್, ನಟರಾಜ, ಆರ್.ವೀರಭದ್ರ, ನಾಟಕ ಅಕಾಡೆಮೆ ಮಾಜಿ ಸದಸ್ಯ ಪಿ.ತಿಪ್ಪೇಸ್ವಾಮಿ, ರುದ್ರಮುನಿ ಮುಂತಾದವರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ