ಕನ್ನಡಪ್ರಭವಾರ್ತೆ ಚಳ್ಳಕೆರೆ
ಸೋಮವಾರ ಛೇಂಬರ್ ಆಫ್ ಕಾರ್ಮಸ್ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವೇಧಿಕೆಯಡಿ ಹಮ್ಮಿಕೊಂಡಿದ್ದ ಸಂವಿಧಾನ ಸನ್ಮಾನ ಅಭಿಯಾನ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜಾಗೃತಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೇಶದ ಸ್ವಾತಂತ್ರ್ಯ ಇತಿಹಾಸವನ್ನು ಅವಲೋಕಿಸಿದಾಗ ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಂಗ್ರೆಸಿಗೂ, ಇಂದಿನ ಕಾಂಗ್ರೆಸ್‌ಗೂ ಅಜಗಜಾಂತರ ವ್ಯತ್ಯಸವಿವೆ. ದೆಹಲಿಯಲ್ಲಿ ನಡೆದ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು ಮೂರು ಚುನಾವಣೆಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರವರನ್ನು ಸ್ವಂತ ಪಕ್ಷದವರೇ ಸೋಲಿಸಿದ್ದರು.ಅಂದಿನ ಪ್ರಧಾನಮಂತ್ರಿ ಜವಹರಲಾಲ್ ರಾಜಕೀಯ ಕುತಂತ್ರಕ್ಕೆ ಅಂಬೇಡ್ಕರ್ ಬಲಿಯಾಗಬೇಕಾಯಿತು. ಅಂಬೇಡ್ಕರ್ ದೆಹಲಿಯಲ್ಲಿ ಮೃತಪಟ್ಟಿದ್ದು ಬಾಡಿಗೆ ವಿಮಾನದಲ್ಲಿ ಅವರ ದೇಹವನ್ನು ಮಹರಾಷ್ಟ್ರಕ್ಕೆ ತರಲಾಯಿತು. ಪ್ರಧಾನಮಂತ್ರಿಯಾಗಿದ್ದ ನೆಹರೂ ಸಹ ನೆರವು ಒದಗಿಸಲಿಲ್ಲ. ಮಾಜಿ ಪ್ರಧಾನಮಂತ್ರಿಗಳಾದ ನೆಹರು, ಇಂದಿರಾಗಾಂಧಿ, ರಾಜೀವಗಾಂಧಿಯವರಿಗೆ ಸುಮಾರು 40 ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಆದರೆ ಕಾಂಗ್ರೆಸ್ ಅಂದು ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಅಂಬೇಡ್ಕರ್‌ರವರನ್ನು ಹೀನಾಯವಾಗಿ ನಡೆಸಿಕೊಂಡ ಕಾಂಗ್ರೆಸ್ ನಡೆಯ ಬಗ್ಗೆ ಪರಿಶಿಷ್ಟ ಜಾತಿ, ವರ್ಗದ ಸಮೂಹ ಚಿಂತನೆ ನಡೆಸಬೇಕು ಎಂದು ಹೇಳಿದರು.
ವಿಚಾರವಾದಿ ವಾದಿರಾಜ್ ಮಾತನಾಡಿ, ಬಿಜೆಪಿ ಸಂವಿಧಾನವನ್ನು ಬದಲಿಸಲಿ ಎಂದು ಅಪಪ್ರಚಾರವನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ಮಾಡುತ್ತಲೇ ಬಂದಿದೆ. ಸಂವಿಧಾನ ಕತೃ ಅಂಬೇಡ್ಕರ್‌ರವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಕಾಂಗ್ರೆಸ್ ಪಕ್ಷ ನಿರಾಕರಿಸಿತ್ತು. ಸಂವಿಧಾನ ರಚಿಸಿದ ಅಂಬೇಡ್ಕರವರೇ ಕಾಲಕ್ಕೆ ತಕ್ಕಂತೆ ಸಂವಿಧಾನವನ್ನು ಬದಲಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ. ಬದಲಾವಣೆಗಳು ದೇಶದ ಅಭಿವೃದ್ಧಿಗೆ ಪೂರಕವಾಗಿರಬೇಕೆಂಬ ದೂರದೃಷ್ಠಿ ಅವರದ್ದಾಗಿತ್ತು. 75 ವರ್ಷದಲ್ಲಿ 106 ಬಾರಿ ಸಂವಿಧಾನ ತಿದ್ದುಪಡಿಯಾಗಿದ್ದು, ವಿಶೇಷವಾಗಿ ಕಾಂಗ್ರೆಸ್ ಆಡಳಿತದಲ್ಲಿ 75 ಬಾರಿ ತಿದ್ದುಪಡಿಯಾದರೆ ಕಾಂಗ್ರೆಸೇತರ ಸರ್ಕಾರಗಳು 31 ಬಾರಿ ತಿದ್ದುಪಡಿ ಮಾಡಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್, ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಮಾಜಿ ಶಾಸಕ ಎಸ್.ತಿಪ್ಫೇಸ್ವಾಮಿ, ಜಯಪಾಲಯ್ಯ, ಎಲೆಭದ್ರಿ, ಡಿ.ದಯಾನಂದ, ಕೆ.ಟಿ.ಕುಮಾರಸ್ವಾಮಿ, ಅನಿಲ್‌ಕುಮಾರ್, ದೇವರಾಜರೆಡ್ಡಿ, ಭಾರ್ಗವಿ ದ್ರಾವಿಡ, ಸಿ.ಎಸ್.ಪ್ರಸಾದ್, ಎನ್.ಓಬಳೇಶ್, ಎನ್.ರಘುಮೂರ್ತಿ, ಟಿ.ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.