ವೋಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ-ಸಂಸದ ಬೊಮ್ಮಾಯಿ

KannadaprabhaNewsNetwork |  
Published : Dec 15, 2025, 03:15 AM IST
ಬಸವರಾಜ ಬೊಮ್ಮಾಯಿ | Kannada Prabha

ಸಾರಾಂಶ

ವೋಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್‌ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ: ವೋಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್‌ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವೋಟ್ ಚೋರಿ ಸುಳ್ಳನ್ನು ಸತ್ಯ ಮಾಡುವ ಅಭಿಯಾನದ ಬಗ್ಗೆ ಬಹಳಷ್ಟು ಕಾಂಗ್ರೆಸ್ ನಾಯಕರಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಅವರ ಪ್ರತಿಷ್ಠೆಗೆ ಅಲ್ಲಿಗೆ ಹೋಗುತ್ತಿದ್ದಾರೆ. ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಹೊರಟವರ ಮೇಲೆ ಕಾಂಗ್ರೆಸ್‌ನವರಿಗೆ ನಂಬಿಕೆ ಇದೆ. ಅದರಿಂದ ಏನೂ ಆಗಲ್ಲ. ಬಿಹಾರ್‌ನಲ್ಲಿ ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡಿದರು. ಅಲ್ಲಿ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಿತು. ಅದರಿಂದ ಇನ್ನೂ ಪಾಠ ಕಲಿತಿಲ್ಲ ಅಂದರೆ ಏನು ಮಾಡಲು ಆಗುವುದಿಲ್ಲ ಎಂದು ಹೇಳಿದರು. ಸತ್ಯ ಹೊರಬರುತ್ತದೆ...ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತಿದಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ಸಲ್ಲಿಸಿದ ತಕ್ಷಣ ಏನೂ ಆಗಲ್ಲ. ಕೋರ್ಟ್‌ನಲ್ಲಿ ಸಾಬೀತಾಗಬೇಕು. ಯಾವ ಸಂದರ್ಭದಲ್ಲಿ ಎಸ್‌ಐಟಿ ರಚನೆ ಆಗಿದೆ? ಎಸ್‌ಐಟಿ ಯಾವ ರೀತಿ ತನಿಖೆ ಮಾಡಿದೆ ಎಂದು ಇಲೆಕ್ಷನ್ ಕಮಿಷನ್ ಆಗಲೇ ಸ್ಪಷ್ಟನೆ ನೀಡಿದೆ. ಆರು ಸಾವಿರ ಮತ ಕಡಿತ ಮಾಡುವಂತೆ ಅರ್ಜಿ ಬಂದರೂ ಕೇವಲ 18 ಮತ ಕಡಿತ ಮಾಡಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ಸತ್ಯ ಹೊರಬರುತ್ತದೆ. ಚುನಾವಣಾ ಆಯೋಗದ ಪಾತ್ರ ಏನು? ಸತ್ಯಾಂಶ ಏನು ಎಲ್ಲವೂ ಹೊರ ಬರುತ್ತದೆ ಎಂದು ಹೇಳಿದರು. ನೈತಿಕ ಪೊಲೀಸ್‌ಗಿರಿ ಒಪ್ಪುವುದಿಲ್ಲ..ಸವಣೂರಿನಲ್ಲಿ ಶಿಕ್ಷಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೈತಿಕ ಪೊಲೀಸ್‌ಗಿರಿ ಒಪ್ಪುವುದಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಅದರ ಬದಲು ರಸ್ತೆಯಲ್ಲಿ ಮೆರವಣಿಗೆ ಮಾಡಿ ಬಟ್ಟೆ ಹರಿಯುವುದು ಸರಿಯಲ್ಲ. ಅಮಾನವೀಯವಾಗಿ ಮಾಡುವ ಕೃತ್ಯಕ್ಕೆ ಅವಕಾಶ ಕೊಡಬಾರದು. ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ಕಾನೂನು ಕೈ ತೆಗೆದುಕೊಂಡಿದ್ದಾರೆ. ಆತ ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು. ಅದಕ್ಕಿಂತ ಮುಂಚೆ ಬೀದಿ ಬೀದಿಗಳಲ್ಲಿ ಮೆರವಣಿಗೆ ಮಾಡಿರುವುದು ಅನಾಗರಿಕತೆ. ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶ ಇಲ್ಲ. ಇಲ್ಲಿ ಪೊಲೀಸರು ನಿಷ್ಕ್ರಿಯ ಆಗಿದ್ದಾರೆ. ಅವರ ನಿರ್ಲಕ್ಷ್ಯದಿಂದ ಇದೆಲ್ಲಾ ಆಗಿದೆ. ಹಲವು ರೇಪ್ ಪ್ರಕರಣಗಳು ನಡೆದರೂ ಪುಂಡ ಪೋಕರಿಗಳನ್ನೇ ಹಿಡಿದಿಲ್ಲ. ಕಾನೂನು ಉಲ್ಲಂಘನೆ ಮಾಡುವವರಿಗೆ ಪ್ರೋತ್ಸಾಹ ಕೊಟ್ಟಿದ್ದಕ್ಕೆ ಇಂತಹ ಪ್ರಕರಣ ನಡೆಯುತ್ತಿವೆ. ಇಲ್ಲದಿದ್ದರೆ ಇದನ್ನು ತಡೆಯಬಹುದಿತ್ತು. ಒಂದು ವರ್ಗ ಓಲೈಸುವ ಕೆಲಸದ ಪರಿಣಾಮ ಈ ರೀತಿ ನಡೆದಿದೆ. ಇದು ಓಲೈಕೆ ರಾಜಕಾರಣದ ಪ್ರತಿಬಿಂಬ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!