ಕನ್ನಡಪ್ರಭ ವಾರ್ತೆ ಹೊಸಕೋಟೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳು ಕೇವಲ ಶೇ.೬೦ರಷ್ಟು ಜನರಿಗೆ ತಲುಪಿದ್ದು, ಶೇ.೪೦ರಷ್ಟು ಜನರಿಗೆ ಯೋಜನೆ ತಲುಪಿಸಲಾಗಿಲ್ಲ.
ಬಿಜೆಪಿ ಅವಧಿಯ ಕಾಮಗಾರಿಗೆ ಕಾಂಗ್ರೆಸ್ ಹೆಸರು?:ಹೊಸಕೋಟೆಗೆ ಮೆಟ್ರೋ ವಿಸ್ತರಿಸಲು ಈ ಹಿಂದೆ ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ಮುಖಾಂತರ ಮನವಿ ಸಲ್ಲಿಸಿ ೨೪೦೦ ಕೋಟಿ ಅನುದಾನದಲ್ಲಿ ವಿಸ್ತರಿಸಲು ಯೋಜನೆ ರೂಪಿಸಿ, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೂಪುರೇಷೆ ಸಿದ್ಧಪಡಿಸಲಾಗಿತ್ತು. ಆದರೆ ಉಪಮುಖ್ಯಮಂತ್ರಿಯವರು ಈಗ ಡಿಪಿಆರ್ ಸಿದ್ಧಪಡಿಸಲು ಆದೇಶಿಸುತ್ತೇನೆಂದು ಹೇಳುತ್ತಿದ್ದಾರೆ. ಹೊಸಕೋಟೆ ಮೆಟ್ರೋ ವಿಸ್ತರಣೆಗೆ ಇವರ ಕೊಡುಗೆ ಏನು ಇಲ್ಲ ಎಂದರು.
ಹೊಸಕೋಟೆ ನಗರದಲ್ಲಿ ಒಳಚರಂಡಿ ಕಾಮಗಾರಿಗೆ ಪೌರಾಡಳಿತ ಸಚಿವನಾಗಿದ್ದ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯು 40.73 ಕೋಟಿ ರು. ಅನುದಾನದ ಜೊತೆಗೆ ಹೆಚ್ಚುವರಿಯಾಗಿ 29.88 ಕೋಟಿ ರು. ಒಟ್ಟಾರೆ 70.61 ಕೋಟಿ ರು. ಮೊತ್ತದ ಪರಿಷ್ಕೃತ ಅಂದಾಜು ಪಟ್ಟಿಗೆ ಅನುಮೋದನೆ ನೀಡಿ ಕಾಮಗಾರಿಯನ್ನು ಪ್ರಾರಂಭಿಸಲು ಆದೇಶಿಸಿತ್ತು. ಇದರ ಜೊತೆಗೆ ಕೆ.ಸಿ.ವ್ಯಾಲಿ ನೀರು ಸಹ ಕೆರೆಗಳಿಗೆ ಹರಿಸಲು ನಮ್ಮ ಅವಧಿಯಲ್ಲಿ ನಡೆದಿದೆ. ಆದರೆ ಹೊಸಕೋಟೆಯಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಈ ಹಿಂದಿನ ಸರ್ಕಾರದಲ್ಲಿ ಅನುಮೋದನೆಗೊಂಡು ಪ್ರಗತಿಯಲ್ಲಿದ್ದಂತಹ ಕಾಮಗಾರಿಗಳೆಲ್ಲವನ್ನು ಸೇರಿಸಿಕೊಂಡು ಕಾಂಗ್ರೆಸ್ ಸರ್ಕಾರ ಬಂದ ನಂತರ ಹೊಸಕೋಟೆ ತಾಲೂಕಿನ ಅಭಿವೃದ್ಧಿಗೆ ಅನುದಾನ ನೀಡಿದ್ದೇವೆ ಎಂಬಂತೆ ಬಿಂಬಿಸಿ ಸಮಾವೇಶ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮಾಜಿ ಜಿಪಂ ಸದಸ್ಯ ಚನ್ನಸಂದ್ರ ಸಿ. ನಾಗರಾಜ್, ಟೌನ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಲಚಂದ್ರನ್, ಬಿಜೆಪಿ ಒಬಿಸಿ ಜಿಲ್ಲಾ ಅಧ್ಯಕ್ಷ ತ.ರ.ವೆಂಕಟೇಶ್, ಚಲನಚಿತ್ರ ನಿರ್ಮಾಪಕ ಕುಮಾರ ಕಂಠೀರವ, ಗ್ರಾಪಂ ಸದಸ್ಯ ಹೇಮಂತ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.ಡಿಕೆಶಿ ಮುಜುಗರವಾಗುತ್ತದೆ ಎಂದು ವೇದಿಕೆಯಲ್ಲಿ ಸತ್ಯ ಹೇಳಿಲ್ಲ
ಹೊಸಕೋಟೆಯಲ್ಲಿ ಈ ಹಿಂದೆ ಪರಿಸ್ಥಿತಿ ಹೇಗಿತ್ತು ಎಂದು ಹಿರಿಯರನ್ನು ಕೇಳಿದರೆ ತಿಳಿಸುತ್ತಾರೆ. ವಿಧಿಯಿಲ್ಲದೇ ಎಂಟಿಬಿನ ಕರೆದುಕೊಂಡು ಚುನಾವಣೆಗೆ ನಿಲ್ಲಿಸಿದೆವು ಎಂದು ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ವೇಳೆ ಹೇಳಿದ್ದರು. ಆದರೆ ಬಚ್ಚೇಗೌಡ ಕುಟುಂಬವನ್ನು ರಾಜಕೀಯವಾಗಿ ಎದುರು ಹಾಕಿಕೊಳ್ಳಲು ಯಾರೂ ಇರಲಿಲ್ಲ, ಎಂಟಿಬಿಗೆ ಆ ತಾಕತ್ ಇದೆ ಎಂದು ಅರಿತು 2004 ರಲ್ಲಿ ಟಿಕೆಟ್ ಕೊಟ್ಟಿದ್ದು. ಆದರೆ ವೇದಿಕೆ ಮೇಲೆ ಸತ್ಯ ಹೇಳಿದರೆ ಮುಜುಗರವಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸತ್ಯ ಹೇಳಲಿಲ್ಲ ಎಂದು ಟಾಂಗ್ ನೀಡಿದರು