ಕಾಂಗ್ರೆಸ್ ಮುಖಂಡ ಸಣ್ಣಸ್ವಾಮಿ ಮೇಲೆ ದೈಹಿಕ ಹಲ್ಲೆ ಆರೋಪ

KannadaprabhaNewsNetwork |  
Published : Jan 22, 2026, 01:30 AM IST
ಕಾಂಗ್ರೆಸ್ ಮುಖಂಡ ಡಿ.ಸಿ. ಸಣ್ಣಸ್ವಾಮಿ ಮೇಲೆ ದೈಹಿಕ ಹಲ್ಲೆಮುರುಳಿ ಮೋಹನ್ ವಿರುದ್ಧ ಕಠಿಣ ಕ್ರಮಕ್ಕೆ ರಂಗಯ್ಯ ಆಗ್ರಹ | Kannada Prabha

ಸಾರಾಂಶ

ಜನವರಿ ೧೬ರಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಕಂದಾಯ ಸಚಿವರೂ ಆದ ಕೃಷ್ಣಬೈರೇಗೌಡ ಅವರು ಜನಸ್ಪಂದನ ಸಭೆ ನಡೆಸಿ, ಸಾವಿರಕ್ಕೂ ಹೆಚ್ಚು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ್ದು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ. ಸಚಿವರ ಈ ಜವಾಬ್ದಾರಿಯುತ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಅದೇ ದಿನ ಸಂಜೆ ಅಧಿಕಾರಿಗಳ ಸಭೆಗೆ ತೆರಳುತ್ತಿದ್ದ ವೇಳೆ ಅಹಿತಕರ ಘಟನೆ ನಡೆದಿದ್ದು, ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ಹೋಗುತ್ತಿದ್ದ ಡಿ.ಸಿ. ಸಣ್ಣಸ್ವಾಮಿ ಅವರನ್ನು ಮುರುಳಿ ಮೋಹನ್ ಗೇಟ್ ಬಳಿ ತಡೆದು ಏಕವಚನದಲ್ಲಿ ನಿಂದಿಸಿ, ಬಟ್ಟೆ ಹಿಡಿದು ಎಳೆದಾಡಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು.

ಕನ್ನಡಪ್ರಭ ವಾರ್ತೆ ಹಾಸನ

ಕಾಂಗ್ರೆಸ್ ಪಕ್ಷದ ಮುಖಂಡ, ಮಾಜಿ ಜಿಲ್ಲಾ ಪಂಚಾಯ್ತಿ ಅಭ್ಯರ್ಥಿ ಹಾಗೂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಪರಾಜಿತ ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ ಮುರುಳಿ ಮೋಹನ್ ದೈಹಿಕ ಹಲ್ಲೆ ನಡೆಸಿರುವ ಘಟನೆ ತೀವ್ರ ಖಂಡಿಸುವುದಾಗಿ ಹಾಗೂ ಸೂಕ್ತ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಮುಖಂಡ ರಂಗಯ್ಯ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಈ ದೌರ್ಜನ್ಯ ಅತ್ಯಂತ ಅಸಭ್ಯ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಜನವರಿ ೧೬ರಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಕಂದಾಯ ಸಚಿವರೂ ಆದ ಕೃಷ್ಣಬೈರೇಗೌಡ ಅವರು ಜನಸ್ಪಂದನ ಸಭೆ ನಡೆಸಿ, ಸಾವಿರಕ್ಕೂ ಹೆಚ್ಚು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ್ದು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ. ಸಚಿವರ ಈ ಜವಾಬ್ದಾರಿಯುತ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಅದೇ ದಿನ ಸಂಜೆ ಅಧಿಕಾರಿಗಳ ಸಭೆಗೆ ತೆರಳುತ್ತಿದ್ದ ವೇಳೆ ಅಹಿತಕರ ಘಟನೆ ನಡೆದಿದ್ದು, ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ಹೋಗುತ್ತಿದ್ದ ಡಿ.ಸಿ. ಸಣ್ಣಸ್ವಾಮಿ ಅವರನ್ನು ಮುರುಳಿ ಮೋಹನ್ ಗೇಟ್ ಬಳಿ ತಡೆದು ಏಕವಚನದಲ್ಲಿ ನಿಂದಿಸಿ, ಬಟ್ಟೆ ಹಿಡಿದು ಎಳೆದಾಡಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು.

ಅಲ್ಲದೇ, ಪೊಲೀಸ್ ಸಿಬ್ಬಂದಿಗೆ ಇವರನ್ನು ಒಳಗೆ ಬಿಡಬೇಡಿ ಎಂದು ಹೇಳಿ ಅವಾಚ್ಯ ಪದಗಳಿಂದ ವರ್ತಿಸಿರುವುದು ಭಯದ ವಾತಾವರಣ ನಿರ್ಮಾಣ ಮಾಡಿದೆ. ಒಬ್ಬ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕ್ಷೇತ್ರದ ಪ್ರಭಾವಿ ಜನನಾಯಕನ ಮೇಲೆ ಈ ರೀತಿಯ ದೌರ್ಜನ್ಯ ನಡೆಸಿರುವುದು ಅತ್ಯಂತ ಖಂಡನೀಯ. ಈ ಘಟನೆ ಸಂಬಂಧ ಮುರುಳಿ ಮೋಹನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ವಿಷಯವನ್ನು ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ನಾಯಕರ ಗಮನಕ್ಕೂ ತರಲಾಗುವುದು ಎಂದು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಆಲೂರು ತಾಲೂಕು ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷ ಹೆಚ್. ಸುರೇಶ್, ಮುಖಂಡರಾದ ಬಿ.ಎಸ್. ಧರ್ಮಪ್ಪ, ಆನಂದ್, ವಸಂತ ಕುಮಾರ್‌ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌
ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ