ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಂದ ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ

KannadaprabhaNewsNetwork |  
Published : Jun 02, 2025, 12:55 AM IST
1ಕೆಎಂಎನ್ ಡಿ13 | Kannada Prabha

ಸಾರಾಂಶ

ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದಿದ್ದರೂ ಕ್ಷೇತ್ರದ ನೀರಾವರಿ ಕಾಮಗಾರಿಗಳ ಪ್ರಗತಿಗೆ 120 ಕೋಟಿ ರು. ಅನುದಾನ ತಂದು ರೈತರ ಪರವಾಗಿ ನಿಂತಿದ್ದಾರೆ. ಕೃಷಿ ಸಚಿವರಿಗೆ ಮತ್ತಷ್ಟು ಜನಪರ ಕೆಲಸ ಮಾಡಲು ಹೆಚ್ಚಿನ ರಾಜಕೀಯ ಶಕ್ತಿ ದೊರಕಲಿ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಚಿವ ಎನ್.ಚಲುವರಾಯಸ್ವಾಮಿ ಅವರ 65ನೇ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿ ಶುಭಕೋರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಪಟ್ಟಣದ ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಶುಭ ಹಾರೈಸಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ನಂತರ ಆಸ್ಪತ್ರೆ ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಕೃಷಿ ಸಚಿವರಾಗಿ ಎನ್.ಚಲುವರಾಯಸ್ವಾಮಿ ಅವರ ಕೊಡುಗೆಗಳನ್ನು ಸ್ಮರಿಸಿದರು. ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಿ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರವನ್ನು ವಿಸ್ತರಿಸಿದ್ದರು. ಕೃಷಿ ಸಚಿವರಾಗಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಿದ್ದಾರೆ. ಅಲ್ಲದೇ, ಮಂಡ್ಯಕ್ಕೆ ಕೃಷಿ ವಿವಿ ತಂದು ಜಿಲ್ಲೆಯ ಕೃಷಿ ಮತ್ತು ಸಂಶೋಧನಾ ಕ್ಷೇತ್ರದ ಪ್ರಗತಿಗೆ ಮುನ್ನುಡಿ ಬರೆದಿದ್ದಾರೆ ಎಂದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದಿದ್ದರೂ ಕ್ಷೇತ್ರದ ನೀರಾವರಿ ಕಾಮಗಾರಿಗಳ ಪ್ರಗತಿಗೆ 120 ಕೋಟಿ ರು. ಅನುದಾನ ತಂದು ರೈತರ ಪರವಾಗಿ ನಿಂತಿದ್ದಾರೆ. ಕೃಷಿ ಸಚಿವರಿಗೆ ಮತ್ತಷ್ಟು ಜನಪರ ಕೆಲಸ ಮಾಡಲು ಹೆಚ್ಚಿನ ರಾಜಕೀಯ ಶಕ್ತಿ ದೊರಕಲಿ ಎಂದು ಕಾರ್ಯಕರ್ತರ ಪರವಾಗಿ ಅಶಿಸಿದರು.

ಈ ವೇಳೆ ರಾಜ್ಯ ನಗರಾಭಿವೃದ್ಧಿ ಮತ್ತು ಹಣಕಾಸು ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸದಸ್ಯ ಕಿಕ್ಕೇರಿ ಸುರೇಶ್, ತಾಲೂಕು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಿವಮ್ಮ, ಮುಖಂಡರಾದ ಮಡುವಿನಕೋಡಿ ಕಾಂತರಾಜು, ಹೆತ್ತುಗೋನಹಳ್ಳಿ ನಾರಾಯಣಗೌಡ, ಅಘಲಯ ರಮೇಶ್, ಸಾಸಲು ಈರಪ್ಪ, ಲಕ್ಷ್ಮೀಪುರ ಚಂದ್ರೇಗೌಡ, ಟಿ.ಎನ್.ದಿವಾಕರ, ಶಿವಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಕುಮಾರ್, ಇಲ್ಯಾಸ್ ಪಾಷ, ಇಲ್ಯಾಸ್ ಅಹಮದ್, ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ರಾಜಯ್ಯ, ಲೋಲಾಕ್ಷಿ, ವಿಜಯ ರಾಮೇಗೌಡ ಅಭಿಮಾನಿ ಬಳಗದ ಅಧ್ಯಕ್ಷ ಬಸವರಾಜು, ಸಚಿವ ಎನ್.ಚಲುವರಾಯಸ್ವಾಮಿ ಆಪ್ತ ಸಹಾಯಕ ಚೇತನಾ ಮಹೇಶ್ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ