ಕಾಂಗ್ರೆಸ್ ನಾಯಕರು ಇತಿಹಾಸವನ್ನು ಮರೆತು ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಹಾವೇರಿ: ಕಾಂಗ್ರೆಸ್ ನಾಯಕರು ಇತಿಹಾಸವನ್ನು ಮರೆತು ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿ, ಪುರಾತನ ಕಾಲದ ಗೂಂಡಾಗಿರಿಯ ಅನುಭವದಿಂದ ಅವರು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಒಮ್ಮೆ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ದೇಶದಲ್ಲಿ ಸಿಖ್ಖರ ನರಹತ್ಯೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲೇ ನಡೆದಿತ್ತು. ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ನಾಯಕರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿ ಯಾವುದೇ ತಾಳವೂ ಇಲ್ಲ, ತಂತಿಯೂ ಇಲ್ಲ ಎಂದು ಟೀಕಿಸಿದರು.
ಆರ್‌ಎಸ್‌ಎಸ್ ಕುರಿತು ಬಿಜೆಪಿ ಯಾವುದೇ ಉತ್ತರ ನೀಡುವುದಿಲ್ಲ. ಆರ್‌ಎಸ್‌ಎಸ್ ಬಗ್ಗೆ ಉತ್ತರ ನೀಡಲು ಸಂಘಟನೆಯವರೇ ಇದ್ದಾರೆ. ಬಿಜೆಪಿ ನಾಯಕರಿಗೂ ಇದೇ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಆರ್‌ಎಸ್‌ಎಸ್ ಕುರಿತ ಟೀಕಿಗೆ ಜನರೇ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಕೇರಳದಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಜೊತೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಜೋಶಿ, ಕಾಂಗ್ರೆಸ್ ನಾಯಕರು ದೇಶದಲ್ಲಿ ಗಲಭೆ ಸೃಷ್ಟಿಸಿ ಅದರ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಾರೆ ಎಂದು ದೂರಿದರು.
ರಾಜ್ಯದಲ್ಲಿ ಸರ್ಕಾರ ರಚನೆಯಾಗಿ 40 ದಿನಗಳಾದರೂ ಸಚಿವ ಸಂಪುಟ ಪೂರ್ಣಗೊಂಡಿಲ್ಲ. ರಾಹುಲ್ ಗಾಂಧಿ ಎಲ್ಲಿದ್ದಾರೆ ಎಂಬುದೇ ಕಾಂಗ್ರೆಸ್‌ಗೆ ಗೊತ್ತಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಎಲ್ಲಿದ್ದಾರೆ ಎಂದು ಕೇಳಿದರೆ ಈಗಲೂ ಹೇಳಬಲ್ಲೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಕೃಷಿ ಸಚಿವರೇ ಇಲ್ಲ. ಮುಖ್ಯಮಂತ್ರಿ ಕೆಲವೆಡೆ ಜಾಲಿ ಪ್ರವಾಸಗಳಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಿಂಥೆಟಿಕ್ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದೇವೆ ಎಂದು ಹೇಳಿದ ಸಂದರ್ಭದಲ್ಲಿ, ಕರ್ನಾಟಕ ಪೊಲೀಸರೂ ಸಮರ್ಥರಾಗಿದ್ದಾರೆ ಎಂದು ನಾನು ಹೇಳಿದ್ದೆ. ಆದರೆ ರಾಜ್ಯದಲ್ಲಿ ಕೆಲ ರಾಜಕಾರಣಿಗಳು ಮಾತ್ರ ಕಳ್ಳರಾಗಿದ್ದಾರೆ ಎಂದು ಹೇಳಿರುವುದಾಗಿ ಜೋಶಿ ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.