ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್‌ ನಾಯಕರ ಆಕ್ರೋಶ

KannadaprabhaNewsNetwork |  
Published : Sep 29, 2026, 02:00 AM IST
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಕಾಂಗ್ರೆಸ್‌ ಮುಖಂಡರು ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಎಸ್‌ಐಆರ್‌ ನೆಪದಲ್ಲಿ ದೇಶಾದ್ಯಂತ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಧಾರವಾಡ:

ವಿಶೇಷ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ರಾಜೀನಾಮೆ ನೀಡುಬೇಕು ಹಾಗೂ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಅಂಗವಾಗಿ ಜ್ಞಾನೇಶಕುಮಾರ್ ಹಾಗೂ ಕೇಂದ್ರದ ಬಿಜೆಪಿ ಮುಖಂಡರ ಪ್ರತಿಕೃತಿಯನ್ನು ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ತಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಈ ಮಧ್ಯೆ ಬೆಂಕಿ ನಂದಿಸಲು ಆಗಮಿಸಿದ ಪೊಲೀಸರ ವಿರುದ್ಧ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

ಎಸ್‌ಐಆರ್‌ ನೆಪದಲ್ಲಿ ದೇಶಾದ್ಯಂತ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ಅರ್ಹ ಮತದಾರರ ಹೆಸರು ಮರುಪರಿಶೀಲಿಸಿ ಪಟ್ಟಿಯಲ್ಲಿ ಉಳಿಸಬೇಕು ಎಂದು ಒತ್ತಾಯಿಸಲಾಯಿತು.

ಮಹಾನಗರ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ, ಶಾಸಕ ಎನ್.ಎಚ್. ಕೋನರಡ್ಡಿ, ಎಚ್.ಎಫ್. ಜಕ್ಕಪ್ಪನವರ, ಮಾಜಿ ಸಂಸದ ಐ.ಜಿ. ಸನ್ನದಿ, ಮುಖಂಡ ದೀಪಕ್ ಚಿಂಚೋರೆ, ಬಸವರಾಜ ಗುರಿಕಾರ, ಗೌರಮ್ಮ ಬಲೋಗಿ, ಚಂದ್ರಶೇಖರ ಜುಟ್ಟಲ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆ ವಿಸ್ತರಣೆ, ಮಾಲಿನ್ಯ ವಿರೋಧಿಸಿ 48 ಗಂಟೆ ಕೊಪ್ಪಳ ಬಂದ್ ಕರೆ
ಸುರಕ್ಷಿತ ಗರ್ಭಪಾತ, ಶ್ರವಣದೋಷ ತಡೆಗೆ ಅರಿವು ಅಗತ್ಯ: ಡಾ. ರಾಜೇಶ್