ಕಾಂಗ್ರೆಸ್ ಮುಖಂಡರು ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್ ಆಗ್ರಹ

KannadaprabhaNewsNetwork |  
Published : Jul 19, 2025, 02:00 AM IST
ಸಂಧ್ಯಾ | Kannada Prabha

ಸಾರಾಂಶ

ಪರಶುರಾಮ ಪ್ರತಿಮೆ ವಿಚಾರದಲ್ಲಿ ಎರಡೂವರೆ ವರ್ಷದಿಂದ ಕಾರ್ಕಳದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡರು ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಕಾರ್ಕಳದ ಅಭಿವೃದ್ಧಿಯ ಹರಿಕಾರ, ಶಾಸಕ ವಿ.ಸುನಿಲ್ ಕುಮಾರ್ ಅವರ ಕನಸಿನ ಕೂಸು ಪರಶುರಾಮ ಥೀಮ್ ಪಾರ್ಕ್ ಯೋಜನೆಯ ವಿರುದ್ಧ ನಿರಂತರ ಅಪಪ್ರಚಾರದಲ್ಲಿ ತೊಡಗಿರುವ ಕಾರ್ಕಳ ಕಾಂಗ್ರೆಸ್ ಗೆ ಪೊಲೀಸ್ ಇಲಾಖೆಯ ತನಿಖೆಯಿಂದ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ನ ಅಪಪ್ರಚಾರವೆಲ್ಲವೂ ಸುಳ್ಳಾಗಿದೆ. ಫೈಬರ್ ಫೈಬರ್ ಎಂದು ಕೂಗುತ್ತಾ ಕಳೆದ ಎರಡೂವರೆ ವರ್ಷದಿಂದ ಕಾರ್ಕಳದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.ಶಾಸಕ ಸುನಿಲ್ ಕುಮಾರ್ ಅವರ ವಿಶೇಷ ಪ್ರಯತ್ನದಿಂದ ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿದ್ದ ಪರಶುರಾಮ ಮೂರ್ತಿ ಫೈಬರ್‌ನಿಂದ ಮಾಡಿಲ್ಲ, ಹಿತ್ತಾಳ‍ೆಯಿಂದ ಮಾಡಿದ್ದು ಎಂಬ ಸತ್ಯ ಪೊಲೀಸ್ ತನಿಖೆಯಿಂದ ಬಯಲಾಗಿರುವುದು ಕಾಂಗ್ರೆಸ್ ನ ಅಪಪ್ರಚಾರಕ್ಕಾಗಿರುವ ದೊಡ್ಡ ಸೋಲಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಗೆ ಭ್ರಷ್ಟಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ರಾಜ್ಯ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಲೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.ಸುಳ್ಳನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕಾಂಗ್ರೆಸ್ಸಿನ ನೈಜ ಬಣ್ಣ ರಾಜ್ಯದ ದೈನಂದಿನ ವಿದ್ಯಮಾನಗಳಿಂದ ಬಟ್ಟಾಬಯಲಾಗಿದೆ. ಭ್ರಷ್ಟಾಚಾರ ಹಾಗೂ ಗ್ಯಾರಂಟಿಗಳ ಅಸಮರ್ಪಕ ನಿರ್ವಹಣೆಯ ಜೊತೆಗೆ ವಿಪರೀತ ಬೆಲೆ ಏರಿಕೆಯಿಂದ ಜನತೆಯ ನೆಮ್ಮದಿ ಹಾಳು ಮಾಡಿರುವ ಅಭಿವೃದ್ಧಿ ವಿರೋಧಿ ಕಾಂಗ್ರೆಸ್ಸಿನ ಸುಳ್ಳುಗಳನ್ನು ನಂಬುವಷ್ಟು ಜನತೆ ದಡ್ಡರಲ್ಲ. ಕೇವಲ ವಿರೋಧಕ್ಕಾಗಿ ವಿರೋಧಿಸುವವರು ಇನ್ನಾದರೂ ವೃಥಾ ಆರೋಪ ಮಾಡುವುದನ್ನು ಬಿಟ್ಟು ನೈಜ ರಾಜಕಾರಣದತ್ತ ಗಮನ ಹರಿಸುವುದು ಉತ್ತಮ ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Latest Stories

ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ
ಚಿಕ್ಕಬಳ್ಳಾಪುರಕ್ಕೂ ಬರಲಿದೆ ಕುಸುಮ್‌ ಯೋಜನೆ
ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೆಪಟೈಟಿಸ್ ಬಿ ಲಸಿಕೆ