ಧಾರವಾಡ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಈ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಜ. 21ರಂದು ದೇಶ ಹಾಗೂ ರಾಜ್ಯದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಮಾಡಲಾಗುತ್ತಿದೆ. ಇದರ ಯಶಸ್ಸಿಗೆ ಶನಿವಾರ ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ಬೆಳಗ್ಗೆ 10ಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಯ ಪಕ್ಷದ ಪ್ರಮುಖರ ಸಭೆ ನಡೆಯಲಿದೆ. ಆನಂತರ ಸಂಜೆ 5ಕ್ಕೆ ಈ ಜಿಲ್ಲೆಗಳ ಸಾರ್ವಜನಿಕರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಾಡ್ ಹೇಳಿದರು.