ಡಿಸಿಎಂ ಡಿ.ಕೆ. ಶಿವಕುಮಾರ್ ಜನ್ಮದಿನ ನಿಮಿತ್ತ ಕಾಂಗ್ರೆಸ್‌ನಿಂದ ವಿಶೇಷ ಪೂಜೆ

KannadaprabhaNewsNetwork |  
Published : May 16, 2026, 01:15 AM IST
ಫೋಟೋ ಮೇ.೧೫ ವೈ.ಎಲ್.ಪಿ. ೦೨ | Kannada Prabha

ಸಾರಾಂಶ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿತು.

ಯಲ್ಲಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿತು.

ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ರಾಜ್ಯಾದ್ಯಂತ ಅತ್ಯಂತ ಕ್ರಿಯಾಶೀಲವಾಗಿ ನಡೆಯುತ್ತಿದ್ದು, ಉಪಮುಖ್ಯಮಂತ್ರಿಗಳಾಗಿ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಭಾಗ್ಯವನ್ನು ಭಗವಂತ ಕರುಣಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ, ಜಿಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್ಟ, ನಗರ ಘಟಕದ ಅಧ್ಯಕ್ಷ ಸತೀಶ ನಾಯ್ಕ, ಪ್ರಮುಖರಾದ ಶಿರೀಷ್ ಪ್ರಭು, ಎಂ.ಡಿ. ಮುಲ್ಲಾ, ಫೈರೋಜ್ ಶೇಖ್, ಗಣೇಶ ಪಾಟಣಕರ್, ಅನಿಲ್ ಮರಾಠೆ, ಸಂತೋಷ ನಾಯ್ಕ, ಫಕ್ಕೀರ್ ಹರಿಜನ, ಮಣಿಕಂಠ ನಾಯ್ಕ, ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಗಣೇಶ ಹೆಗಡೆ, ಪಪಂ ಮಾಜಿ ಸದಸ್ಯ ಅಮಿತ ಅಂಗಡಿ, ರಾಜು ನಾಯ್ಕ, ನರ್ಮದಾ ನಾಯ್ಕ, ಸುನಂದಾ ದಾಸ್, ಮಹಿಳಾ ಕಾಂಗ್ರೆಸ್ ನ ಪೂಜಾ ನೇತ್ರೆಕರ್, ರೂಪಾ ಪಾಟಣಕರ್, ಸರಸ್ವತಿ ಗುನಗಾ, ಮುಶರತ್ ಖಾನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.ಡಿಕೆಶಿ ಹುಟ್ಟುಹಬ್ಬ: ಹಣ್ಣು ಹಂಪಲು ವಿತರಣೆ

ಮುಂಡಗೋಡ: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಶುಕ್ರವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಬ್ಲಾಕ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಂ. ದುಂಡಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ರವಿಗೌಡ ಪಾಟೀಲ, ಧರ್ಮರಾಜ ನಡಗೇರ, ರಫೀಕ್ ಇನಾಮದಾರ, ಗೋಪಾಲ ಪಾಟೀಲ, ಕೆಂಜೋಡಿ ಗಲಬಿ, ಗೌಸ್ ಮಖಾಂದಾರ, ದೇವು ಪಾಟೀಲ, ಜ್ಞಾನದೇವ ಗಿಡಿಯಾಳ, ರಾಜು ಬೋವಿ, ವಸಂತ ರಾಣಿಗೇರ, ಹುಲಗಪ್ಪ ಬೋವಿ, ಬಾಬುರಾವ್ ಲಾಡನವರ, ಮೋಹನ ಲಾಡನವರ, ಸಲ್ಮಾ ಶೇರಖಾನೆ, ಜೈನು ಬೆಂಡಿಗೇರಿ, ಅಲ್ಲಾವುದ್ದಿನ ಕಮಡೊಳ್ಳಿ, ಆಸೀಫ್‌, ಇರ್ಫಾನ್‌ ಸವಣೂರ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್ಥಿಕ ಸ್ವಾವಲಂಬನೆಗಾಗಿ ದುಡಿಮೆ ಅನಿವಾರ್ಯ
ಕನಕಗಿರಿ ಉತ್ಸವ ಮುಂದೂಡಿಕೆ, ಜನರಿಗೆ ನಿರಾಸೆ