ಬಾಗೇಪಲ್ಲಿ: ಕಾಂಗ್ರೆಸ್‌ನವರಿಗೆ ದಲಿತರ ವೋಟ್ ಮಾತ್ರ ಬೇಕು. ಆದರೆ ದಲಿತರ ಉದ್ದಾರದ ಬಗ್ಗೆ ಮಾತ್ರ ಕಾಳಜಿ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಪ.ಜಾ, ಪ.ಪಂ, ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಅನುದಾನ ನೀಡಲು ಸರ್ಕಾರದಲ್ಲಿ ಹಣವಿಲ್ಲದೆ ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿ.ಮುನಿರಾಜು ಆರೋಪಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಜಗಜೀವನ್ ರಾಂ ಅವರ ಜಯಂತಿ ಅಂಗವಾಗಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ವಿವಿಧ ದಲಿತ ಸಂಘಟನೆಗಳ ಆಯೋಜಿಸಲಾಗಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರನ್ನು ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಂಡು ಸರ್ಕಾರ ನಡೆಸುತ್ತಿದೆ. ಆದರೆ ದಲಿತರಿಗೆ ಸಿಗಬೇಕಾಗಿರುವ ಸೌಲತ್ತುಗಳನ್ನು ನೀಡುವಲ್ಲಿ ನಿರ್ಲಕ್ಷ್ಯಧೋರಣೆ ಅನುಸುತ್ತಿರುವುದಲ್ಲದೆ ದಲಿತರ ಅಭಿವೃದ್ಧಿಯ ವಿಚಾರದಲ್ಲಿ ಕಾಳಜಿ ವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಜಮೀನು ಯಾರು ತಗೋಬಾರದು ಅದನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ವಿಧಾನಸಭೆಯಲ್ಲಿ ಮಾತನಾಡಿರುವ ಬಾಗೇಪಲ್ಲಿ ಶಾಸಕರು ತಮ್ಮ ಕುಟುಂಬದವರ ಹೆಸರಿನಲ್ಲಿ ಜಮೀನು ನೋಂದಣಿ ಮಾಡಿಸಿಕೊಂಡಿರುವ ದಾಖಲೆಗಳು ನನ್ನ ಬಳಿ ಇವೆ, ನಾನು ಸುಮ್ಮನೆ ಕುಳಿತುಕೊಳುವುದಿಲ್ಲ ಕಾದುಕುಳಿತಿದ್ದೇನೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ನಾನು ದಲಿತರ ಪರವಾಗಿದ್ದೇನೆ ಅನ್ಯಾಯವಾಗಿರುವ ದಲಿತರಿಗೆ ನ್ಯಾಯ ಸಿಗುವವರೆವಿಗೂ ಹೋರಾಟ ಮಾಡುತ್ತೇನೆ. ನಾನು ಯಾರಿಗೂ ಭಯಪಡುವುದಿಲ್ಲ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿರುದ್ದ ವಾಗ್ದಾಳಿ ನಡೆಸಿದರು.ರಾಜಕೀಯ ಶಾಶ್ವತವಲ್ಲ, ತಾವು ಚುನಾವಣೆಯಲ್ಲಿ ಗೆದ್ದನಂತರ ಕ್ಷೇತ್ರದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆದರೆ ನೀವು ನಿಮ್ಮ ಪಕ್ಷದವಿಗೆ ಮಾತ್ರ ರಕ್ಷಣೆ ನೀಡುತ್ತಿರುವುದು ಎಷ್ಟು ಸರಿ. ಪಟ್ಟಣದಲ್ಲಿ ತಕ್ಷಣ ಅಂಬೇಡ್ಕರ್ ಭವನ ನಿರ್ಮಾಣ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಚ್ಚರಿಗೆ ನೀಡಿದರು,
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಆರ್.ಪ್ರತಾಪ್, ದಲಿತ ಮುಖಂಡರಾದ ಚಿನ್ನಪೂಜಪ್ಪ, ವೆಂಕಟೇಶ್, ಲಕ್ಷ್ಮೀನಾರಾಯಣ್, ಜಯಂತ್ ಮತ್ತಿತರರು ಇದ್ದರು.14ಬಿಜಿಪಿ-2: ಬಾಗೇಪಲ್ಲಿಯಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ.ಬಾಬುಜಗಜೀವನ್ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿ.ಮುನಿರಾಜು ಮಾತನಾಡಿದರು.