ಹೊಸಪೇಟೆ: ಕಾಂಗ್ರೆಸ್ ಪಕ್ಷದ ವಿಜಯನಗರ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ವತಿಯಿಂದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದ ನಿಮಿತ್ತ ಬೃಹತ್ ಸಹಿ ಸಂಗ್ರಹವನ್ನು ಸೋಮವಾರ ನಡೆಸಿದರು.
ಕೇಂದ್ರ ಚುನಾವಣೆ ಆಯೋಗ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತಗಳ್ಳತನ ಮಾಡಿದ್ದು, ಆದರೂ ಸರಿಯಾಗಿ ತನಿಖೆ ನಡೆಸಲಾಗುತ್ತಿಲ್ಲ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ವೋಟ್ ಚೋರಿ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ನಗರದ ಜೈ ಭೀಮ್ ಸರ್ಕಲ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಬಳಿಕ ನಗರದ ಮುಖ್ಯ ರಸ್ತೆಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಡಾ.ಪುನೀತ್ ರಾಜ್ ಕುಮಾರ ವೃತ್ತದಲ್ಲಿ ಮುಖಂಡರು ಬೃಹತ್ ಸಹಿ ಅಭಿಯಾನ ಮಾಡುವ ಮೂಲಕ ಪ್ರತಿಭಟನೆ ಸಮಾಪನೆಗೊಂಡಿತು.ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಕೆ.ರಮೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಖಾಜಾ ಹುಸೇನ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಮೋಹಮ್ಮದ ಇಮಾಮ್ ನಿಯಾಜಿ, ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಕಾಂಗ್ರೆಸ್ ಪಕ್ಷದ ಮುಖಂಡರಾದ ರಶ್ಮಿ ರಾಜಶೇಖರ ಹಿಟ್ನಾಳ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನೆಳ್ಳಪ್ಪ, ಜಿಲ್ಲಾ ಸೇವಾದಳ ಜಿಲ್ಲಾ ಸಂಘಟಕ ಬಿ.ಮಾರಣ್ಣ , ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಕೆ.ಎಸ್.ದಾದಪೀರ್, ಅಸಂಘಟಿತ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿಗಳಾದ ಸಂಗಪ್ಪ, ಗೋವಿಂದಪ್ಪ, ನಗರಸಭೆ ಸದಸ್ಯರಾದ ಕನಕಮ್ಮ, ಗುಜ್ಜಲ ರಾಘವೇಂದ್ರ, ವಿ.ಹುಲುಗಪ್ಪ, ದಾದಾ ಖಲಂದರ್, ಕೆಪಿಸಿಸಿ ಪದವೀಧರರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ವೀರಾಂಜನೇಯ, ಕಾನೂನು ವಿಭಾಗದ ಎಚ್ ಮಹೇಶ್, ಪದವೀಧರರ ವಿಭಾಗದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮುಖಂಡರಾದ ಯುವ ಕಾಂಗ್ರೆಸ್ ಮುಖಂಡ ತಾಜುದ್ದೀನ್, ರಿಯಾಜ್ , ಭರತ ಕುಮಾರ್, ಜಿ.ಶಿವಕುಮಾರ, ವೀರಭದ್ರ ನಾಯಕ ಮತ್ತಿತರರಿದ್ದರು.