
ಕನ್ನಡಪ್ರಭ ವಾರ್ತೆ, ತುಮಕೂರು
ಇದಕ್ಕೂ ಮೊದಲು ಬೆಳಗ್ಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ತಮ್ಮ ಪತ್ನಿ ಅಮೂಲ್ಯ ಹಾಗೂ ಹಲವು ಕಾಂಗ್ರೆಸ್ ಮುಖಂಡರೊಂದಿಗೆ ಶಶಿ ಹುಲಿಕುಂಟೆಮಠ್ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮುಖಂಡರು ಪಕ್ಷದ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಘೋಷಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೇಮಠ್, ಅಭ್ಯರ್ಥಿಯಾದ ನಂತರ ಆಗ್ನೇಯ ಪದವಿಧರ ಕ್ಷೇತ್ರದಾದ್ಯಂತ ಸಾಕಷ್ಟು ಬಾರಿ ಪ್ರವಾಸ ಮಾಡಿ ಸಚಿವರು, ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಪದವೀಧರ ಮತದಾರರನ್ನು ಭೇಟಿ ಮಾಡಿ ತಮಗೆ ಬೆಂಬಲ ಡುವಂತೆ ಕೋರಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಶಶಿ ಹುಲಿಕುಂಟೆಮಠ್ ಅವರ ಗೆಲುವಿಗೆ ಪಕದ ಎಲ್ಲಾ ಮುಖಂಡರು ಒಟ್ಟಾಗಿ ಕೆಲಸ ಮಾಡುತ್ತೇವೆ. ಸರ್ಕಾರ ಕಾರ್ಯಕ್ರಮಗಳೂ ಇವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಮುಖಂಡ ಇಕ್ಬಾಲ್ ಅಹ್ಮದ್ ಮಾತನಾಡಿ, ಆಗ್ನೇಯ ಪದವಿಧರರ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಆರಂಭಿಸಿರುವ ಶಶಿ ಹುಲಿಕುಂಟೆಮಠ್, ಮತದಾರರ ಒಲವು ಗಳಿಸುವಲ್ಲಿ ಯಶಸ್ವಿ ಹಾದಿಯಲ್ಲಿದ್ದಾರೆ. ಇವರ ಗೆಲುವಿಗೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದರು.