ಕಾಂಗ್ರೆಸ್ ಪ ಗ್ಯಾರಂಟಿ ಯೋಜನೆಗಳು ಬಡವರಿಗೆ ಸಹಕಾರಿ

KannadaprabhaNewsNetwork |  
Published : Jul 08, 2026, 02:00 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರು ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ಇಲ್ಲಿನ ಜನರ ನಿಷ್ಕಲ್ಮಶ ಪ್ರೀತಿಯಿಂದ ನನ್ನ ಹೃದಯ ತುಂಬಿ ಬಂದಿದೆ. ತಾಲೂಕಿನ ಜನರ ಈ ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ರಾಜ್ಯದ 90ರಷ್ಟು ಜನಕ್ಕೆ ಪಕ್ಷದ ನಮ್ಮ ಗ್ಯಾರಂಟಿಗಳು ತಲುಪಿವೆ. ಇದರಿಂದ ರಾಜ್ಯದ ಜನತೆ ಸಂತೋಷದಿಂದ ಜೀವನ ಮಾಡುತ್ತಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಮತ್ತಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದೀಗ ಬಿಜೆಪಿ ಪಕ್ಷವು ಎಸ್ ಐ ಆರ್ ಮೂಲಕ ಬಡವರ ವೋಟಿನ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದುಳಿದ ಜನಾಂಗಗಳ ಕಲ್ಯಾಣಕ್ಕಾಗಿ ಹೋರಾಡಿದ್ದು ಈಗ ಅಂತಹ ಹಿಂದುಳಿದ, ಅಲ್ಪ ಸಂಖ್ಯಾತ ಮತಗಳ ರದ್ದತಿಗೆ ಬಿಜೆಪಿ ಸಂಚು ರೂಪಿಸಿದೆ. ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ನಿರ್ಧಾರ ನನ್ನದಾಗಿದ್ದು ಬರುವ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರ ನನ್ನ ಮೇಲಿರಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಧನಂಜಯ ಕುಮಾರ್, ಹೆಚ್ ಆರ್ ತಿಮ್ಮಯ್ಯ, ಸಾದತ್ ಉಲ್ಲಾ, ಓಬಳೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರೆಗೆ ಒಳಹರಿವು ಆರಂಭ: ರೈತರಲ್ಲಿ ಮತ್ತೆ ಚಿಗುರಿದ ಆಶಾಭಾವ
ಪಾಲಕರು ಮಕ್ಕಳ ಪ್ರತಿಭೆ ಗುರುತಿಸಲಿ: ಸುರೇಶ್‌ ಕುಲಕರ್ಣಿ