ನಾರಿಶಕ್ತಿ ವಂದನಾ ವಿಧೇಯಕ ಸೋಲಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಕಾರಣ

KannadaprabhaNewsNetwork |  
Published : Apr 19, 2026, 01:30 AM IST
ಪೊಟೊ-18ಕೆಎನ್ ಎಲ್ ಎಮ್ 1- ನೆಲಮಂಗಲ ನಗರದ ತಾಲೂಕು ಕಚೇರಿ ಮುಂಭಾಗ ನಾರಿಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ)  ವಿಧೇಯಕ ಸೋಲಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಕಾರಣವೆಂದು ಆರೋಪಿಸಿ, ಬಿಜೆಪಿ ಮಹಿಳಾ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ನೆಲಮಂಗಲ: ನಾರಿಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ವಿಧೇಯಕ ಸೋಲಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಕಾರಣವೆಂದು ಆರೋಪಿಸಿ ಬಿಜೆಪಿ ಮಹಿಳಾ ಕಾರ್ಯಕರ್ತರು ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು

ನೆಲಮಂಗಲ: ನಾರಿಶಕ್ತಿ ವಂದನಾ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ವಿಧೇಯಕ ಸೋಲಿಗೆ ಕಾಂಗ್ರೆಸ್ ಪಕ್ಷದ ವಿರೋಧವೇ ಕಾರಣವೆಂದು ಆರೋಪಿಸಿ ಬಿಜೆಪಿ ಮಹಿಳಾ ಕಾರ್ಯಕರ್ತರು ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುರೇಶ್ ಮಾತನಾಡಿ, ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ 2/3 ಮತಗಳನ್ನು ಪಡೆಯುವಲ್ಲಿ ವಿಫಲವಾಗಿ, ಸೋಲಾಗಿರುವ ಬೆಳವಣಿಗೆಯನ್ನು ‘ಕರಾಳ ದಿನ’ ಎಂದು ಕರೆದಿರುವ ಬಿಜೆಪಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಮಹಿಳೆಯರಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿರು.

ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಎಂಬುದು ಸಾಬೀತಾಗಿದೆ. ದೇಶದ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ’ ವಿರೋಧ ಪಕ್ಷದವರು ದೇಶದ ಮಹಿಳೆಯರಿಗೆ ನೋವುಂಟು ಮಾಡಿದ್ದಾರೆ. ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡ ಬಳಿಕ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮಹಿಳೆಯರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಚೌದರಿ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯ ಅನುಮೋದನೆ ಸಿಗದಿದ್ದಕ್ಕಾಗಿ ಸರ್ಕಾರ ಮತ್ತು ಮೈತ್ರಿಕೂಟಕ್ಕೆ ಬೇಸರವಿದೆ. ಆದರೂ ಇದು ಪಕ್ಷ ಹಾಗೂ ಸರ್ಕಾರದ ಸೋಲು ಎಂದು ಪರಿಗಣಿಸುವುದಿಲ್ಲ. ನಾವು ಮಹಿಳೆಯರಿಗೆ ಗೌರವ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು ಬಯಸಿದ್ದೆವು. ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಪ್ರಯತ್ನವನ್ನು ಮುಂದುವರಿಸುತ್ತೇವೆ’ ಎಂದು ಬಿ ಜೆ ಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ರಾಜಮ್ಮ ಪ್ರಕಾಶ್ ತಿಳಿಸಿದರು

ಪ್ರತಿಭಟನೆಯಲ್ಲಿ ಮುಖಂಡರಾದ ಸೌಮ್ಯ , ವೇದಾವತಿ, ಶಾಂತ ಕುಮಾರಿ ,ಶೈಲಜಾ , ಮಂಗಳಮ್ಮ ರಾಜೇಶ್ವರಿ , ಸೇರಿದಂತೆ ಹಲವಾರು ಮಹಿಳಾ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಗಣೇಶ್‌ ಪ್ರಸಾದ್‌ ಗೆ ಕೃತಜ್ಞತೆ ಸಲ್ಲಿಸಿದ ಮಲೆಯೂರು ಸುತ್ತ ಮುತ್ತಲಿನ ರೈತರು
ಭಾರತ ಮಹಿಳೆಗೆ ಇಂಡಿಯಾ ಕೂಟ ಅವಮಾನ: ಶಾಸಕ ಚನ್ನಬಸಪ್ಪ