2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ

KannadaprabhaNewsNetwork |  
Published : May 24, 2026, 01:30 AM IST
ಫೋಟೋ : 23 ಹೆಚ್ ಎಸ್ ಕೆ 2 ಹೊಸಕೋಟೆ ನಗರದ ಖಾಸಗಿ ಸಭಾಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಯುವ ಸಮ್ಮೇಳನ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ತಾಲೂಕು ಅಧ್ಯಕ್ಷ ಅನೂಪ್ ಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ರಾಜ್ಯದಲ್ಲಿ ಬಡ ಮಧ್ಯಮ ವರ್ಗದವರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿಗಳೊಂದಿಗೆ ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ೨೦೨೮ರಲ್ಲಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ರಾಜ್ಯದಲ್ಲಿ ಬಡ ಮಧ್ಯಮ ವರ್ಗದವರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿಗಳೊಂದಿಗೆ ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ೨೦೨೮ರಲ್ಲಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಯುವ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಆಶ್ವಾಸನೆ ಕೊಟ್ಟ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಆಶ್ವಾಸನೆಯನ್ನು ಮರೆತಿದೆ. ಬದಲಾಗಿ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಯನ್ನು ಗಣನೀಯವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ ಬಡವರ ಬದುಕನ್ನ ಸಂಕಷ್ಟಕ್ಕೆ ದೂಡಿದೆ. ದೇಶಕ್ಕೆ ಸ್ವಾತಂತ್ರ‍್ಯ ಬಂದ ದಿನದಿಂದಲೂ ಬಡವರ ಹಿತಕ್ಕಾಗಿ ಕೆಲಸ ಮಾಡುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನೆಮನಗಳಿಗೆ ತಲುಪಿಸಿ ಮತ್ತಷ್ಟು ಪಕ್ಷ ಸಂಘಟನೆಯತ್ತ ಗಮನ ಹರಿಸಬೇಕು. ಪ್ರಜಾಪ್ರಭುತ್ವವನ್ನು ಉತ್ತಮ ದಾರಿಯಲ್ಲಿ ಕೊಂಡೊಯ್ಯಲು ಯುವಕರಿಂದ ಮಾತ್ರ ಸಾಧ್ಯ. ತಾಲೂಕಿನಲ್ಲಿ ಅನೂಪ್ ಗೌಡರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಿ ಪಕ್ಷ ಸಂಘಟನೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲಿ ಎಂದು ಪ್ರೋತ್ಸಾಹಿಸಿದರು.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್ ಮಂಜುನಾಥ್ ಗೌಡ ಮಾತನಾಡಿ, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದೇ ತರುತ್ತೇವೆ. ಈ ನಿಟ್ಟಿನಲ್ಲಿ ದೃಢ ಸಂಕಲ್ಪ ಹೊತ್ತು ಕೆಲಸ ಮಾಡಲು ಕಾರ್ಯಕರ್ತರು ಮುಂದಡಿ ಇಟ್ಟಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಮ್ಮನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ. ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿ ಯೋಜನೆಗಳ ಸೌಲಭ್ಯ ಬಿಜೆಪಿಯವರೆ ಹೆಚ್ಚಾಗಿ ಪಡೆಯುತ್ತಿದ್ದಾರೆ. ಯುವ ಕಾಂಗ್ರೆಸ್ ಕೇವಲ ಕಾಂಗ್ರೆಸ್ ಪಕ್ಷದ ಸಂಘಟನೆ ಅಲ್ಲ, ಸಮಾಜದಲ್ಲಿ ನೊಂದವರಿಗೆ ಸಾಮಾಜಿಕವಾಗಿಯೂ ನೆರವಿನ ಹಸ್ತ ಚಾಚುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರ ಕಾರ್ಯದರ್ಶಿ ಬಾಲ ಮುರಳಿ, ಕಾರ್ಯದರ್ಶಿ ರಮೇಶ್, ಜಿಲ್ಲಾಧ್ಯಕ್ಷ ಶರತ್, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಕೊರಳೂರು ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸುನಿಲ್ ಕೃಷ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಚಕ್ರವರ್ತಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.

ಕೋಟ್‌..........ಕೇಂದ್ರ ಸರ್ಕಾರ ಪಂಚ ರಾಜ್ಯಗಳ ಚುನಾವಣೆ ಮುಗಿದು ಫಲಿತಾಂಶ ಬಂದ ಕೂಡಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿದೆ. ಕಳೆದ ಒಂದು ವಾರದಿಂದ ಮೂರು ಬಾರಿ ಮೂರ್ನಾಲ್ಕು ರುಪಾಯಿ ಏರಿಕೆ ಮಾಡಿದೆ. ಇಡೀ ವಿಶ್ವದಲ್ಲಿಯೇ ವೀಕ್ ಕರೆನ್ಸಿ ಎಂದರೆ ಭಾರತದ ರುಪಾಯಿ. ದೇಶದ ಆರ್ಥಿಕ ವ್ಯವಸ್ಥೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ

-ಶರತ್ ಬಚ್ಚೇಗೌಡ, ಶಾಸಕ

ಬಾಕ್ಸ್‌...........

ನಿಖಿಲ್ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ

ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೈತರ ಪರವಾಗಿದ್ದೇವೆ ಎಂದು ಸುಳ್ಳು ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ನೂರಾರು ಹೆಣ್ಣು ಮಕ್ಕಳಿಗೆ ಅವರ ಅಣ್ಣ ಮೋಸ ಮಾಡಿದ್ದಾನೆ. ಅವರ ವಿರುದ್ಧ ಮಾತನಾಡಲಿ. ಅದನ್ನು ಬಿಟ್ಟು ರಾಜಕೀಯ ಅನುಭವ ಇಲ್ಲದೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಪ್ರಶ್ನೆ ಮಾಡುತ್ತಾರೆ. ಯುವನಾಯಕನಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಮೊದಲು ಅವರಪ್ಪ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿದ್ದು ಸಂಸತ್ ನಲ್ಲಿ ರಸಗೊಬ್ಬರ ಸಮಸ್ಯೆ ಬಗ್ಗೆ ಮಾತನಾಡಲು ಒತ್ತಾಯಿಸಲಿ. ತನ್ನ ದೊಡ್ಡಪ್ಪನ ಮಗ ಮಾಡಿದ ಅತ್ಯಾಚಾರದ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಿ ಎಂದು ನಿಖಿಲ್‌ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ವಾಗ್ದಾಳಿ ನಡೆಸಿದರು.

ಫೋಟೋ : 23 ಹೆಚ್ ಎಸ್ ಕೆ 2

ಹೊಸಕೋಟೆ ನಗರದ ಖಾಸಗಿ ಸಭಾಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಯುವ ಸಮ್ಮೇಳನ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ತಾಲೂಕು ಅಧ್ಯಕ್ಷ ಅನೂಪ್ ಗೌಡ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರುಮೌಲ್ಯಮಾಪನ: ಪಿಯುಸಿಯಲ್ಲಿ ಅನನ್ಯಗೆ ಹೆಚ್ಚುವರಿ 6 ಅಂಕ
ತುಂಗಾ ಮಹಾವಿದ್ಯಾಲಯದಲ್ಲೇ ಡಾ.ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪಿಸಿ: ಕಲ್ಲೂರು ಮೇಘರಾಜ