ಡಿಕೆಶಿ ಪರವಾಗಿ ಹಂಪಿಯಲ್ಲಿ ಕಾಂಗ್ರೆಸ್‌ನಿಂದ ಪೂಜೆ

KannadaprabhaNewsNetwork |  
Published : Jun 01, 2026, 02:15 AM IST
ಫೋಟೋವಿವರ- (31ಎಚ್‌ಪಿಟಿ2) ಹಂಪಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಅವರಿಗೆ ಶುಭವಾಗಲೆಂದು ಜಿಲ್ಲಾ ಯುವ ಕಾಂಗ್ರೇಸ್‌ನಿಂದ ವಿರುಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದೆ.

ಹೊಸಪೇಟೆ: ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಹೊಸಪೇಟೆ ನಗರಸಭೆ ಸದಸ್ಯರು ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದಿಂದ ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡ ಭರತಕುಮಾರ್ ಸಿ.ಆರ್. ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದೆ. ಸಿದ್ದರಾಮಯ್ಯ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ, ಉತ್ತಮ ಮುಖ್ಯಮಂತ್ರಿ ಎಂದು ಹೆಸರು ಗಳಿಸಿದ್ದರು. ಅದೇ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿ, ಸುಭದ್ರ ಸರ್ಕಾರ ನಡೆಸಲು ಹಂಪಿ ವಿರೂಪಾಕ್ಷೇಶ್ವರ ಶಕ್ತಿ ನೀಡಲಿ. ಮುಂದಿನ ಅವಧಿಗೂ ಡಿ.ಕೆ. ಶಿವಕುಮಾರ್ ಅಧಿಕಾರದಲ್ಲಿ ಇರಲಿ ಎಂದು ಪ್ರಾರ್ಥಿಸಿಕೊಂಡಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ದಾದಾ ಕಲಂದರ್, ನಗರಸಭಾ ಸದಸ್ಯರಾದ ಮಂಜುನಾಥ, ಹುಲುಗಪ್ಪ, ಗೌಸ್, ಮುಖಂಡರಾದ ವೆಂಕಟೇಶ, ಶೇಖರ, ರಾಜು ಗುಜ್ಜಲ್, ಮಹಮ್ಮದ್ ಸುಹೇಲ್, ಆಕಾಶ, ನವೀನ್ ಕುಮಾರ್ ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ವಿರೂಪಾಕ್ಷೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಜಿಲ್ಲೆಯಲ್ಲಿ ಇಂದಿನಿಂದ 1612 ಶಾಲೆ ಆರಂಭ
ಗಣೇಶ್‌ಗೆ ಸಚಿವ ಸ್ಥಾನ ನೀಡಬೇಕು; ಕಡೆಗಣಿಸಿದರೆ ಹೋರಾಟ