ಜ್ಞಾನೇಶ ಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Sep 29, 2026, 01:15 AM IST
88888 | Kannada Prabha

ಸಾರಾಂಶ

ಮಾಜಿ ಶಾಸಕ ಡಾ.ಎಸ್.ಷಪಿ ಅಹಮದ್ ಮಾತನಾಡಿ, ಕಳೆದ ಒಂದು ವರ್ಷದ ಹಿಂದೆಯೇ ನಮ್ಮ ನಾಯಕರಾದ ರಾಹುಲ್‌ಗಾಂಧಿ ಅವರು ಓಟ್‌ ಚೋರಿ ಬಗ್ಗೆ ಮಾತನಾಡಿದಾಗ ಮಾಧ್ಯಮಗಳ ಮೂಲಕ ಅವರ ಬಾಯಿ ಕಟ್ಟಿ ಹಾಕುವ ಕೆಲಸವನ್ನು ಬಿಜೆಪಿ ಮಾಡಿತ್ತು. ಆದರೆ ಚುನಾವಣಾ ಆಯೋಗದ ಇತರೆ ಆಯುಕ್ತರೇ ಇಂದು ತಮ್ಮ ನಡುವೆ ಹಲವು ವಿಚಾರಗಳಲ್ಲಿ ಭಿನ್ನಮತವಿದೆ ಎಂಬುದನ್ನು, ತಮ್ಮ ಆಕ್ಷೆಪಣೆಗಳಿಗೆ ಬೆಲೆ ಇಲ್ಲ ಎಂದು ಸರಕಾರಕ್ಕೆ ಪತ್ರ ಬರೆದಿರುವುದು ಚುನಾವಣಾ ಆಯೋಗ ದಾರಿ ತಪ್ಪಿರುವುದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಜ್ಞಾನೇಶಕುಮಾರ್‌ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಭಾರತೀಯ ಚುನಾವಣಾ ಆಯೋಗದ ಮುಖ್ಯಆಯುಕ್ತರಾದ ಜ್ಞಾನೇಶ ಕುಮಾರ್‌ ಅವರ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೂ ಆಗಿರುವ ಎಸ್.ಐ.ಆರ್.ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ನಿರತ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಎಸ್.ಐ.ಆರ್.ನಂತಹ ಸಂವಿಧಾನ ಬಾಹಿರ ಯೋಜನೆಯನ್ನು ಜಾರಿಗೆ ತಂದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆ ಪಡೆದು, ಅಕ್ರಮಗಳ ತನಿಖೆ ನಡೆಸಬೇಕು ಹಾಗೂ ಇದುವರೆಗೂ ಆಗಿರುವ ಎಸ್.ಐ.ಆರ್ ಪ್ರಕ್ರಿಯೆಯ ಜೊತೆಗೆ, ಎಸ್.ಐ.ಆರ್.ನಂತರ ನಡೆದಿರುವ ಚುನಾವಣೆಗಳನ್ನು ರದ್ದು ಮಾಡಬೇಕೆಂಬುದು ಆಗ್ರಹಿಸಿದರು.

ಮಾಜಿ ಶಾಸಕ ಡಾ.ಎಸ್.ಷಪಿ ಅಹಮದ್ ಮಾತನಾಡಿ, ಕಳೆದ ಒಂದು ವರ್ಷದ ಹಿಂದೆಯೇ ನಮ್ಮ ನಾಯಕರಾದ ರಾಹುಲ್‌ಗಾಂಧಿ ಅವರು ಓಟ್‌ ಚೋರಿ ಬಗ್ಗೆ ಮಾತನಾಡಿದಾಗ ಮಾಧ್ಯಮಗಳ ಮೂಲಕ ಅವರ ಬಾಯಿ ಕಟ್ಟಿ ಹಾಕುವ ಕೆಲಸವನ್ನು ಬಿಜೆಪಿ ಮಾಡಿತ್ತು. ಆದರೆ ಚುನಾವಣಾ ಆಯೋಗದ ಇತರೆ ಆಯುಕ್ತರೇ ಇಂದು ತಮ್ಮ ನಡುವೆ ಹಲವು ವಿಚಾರಗಳಲ್ಲಿ ಭಿನ್ನಮತವಿದೆ ಎಂಬುದನ್ನು, ತಮ್ಮ ಆಕ್ಷೆಪಣೆಗಳಿಗೆ ಬೆಲೆ ಇಲ್ಲ ಎಂದು ಸರಕಾರಕ್ಕೆ ಪತ್ರ ಬರೆದಿರುವುದು ಚುನಾವಣಾ ಆಯೋಗ ದಾರಿ ತಪ್ಪಿರುವುದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಜ್ಞಾನೇಶಕುಮಾರ್‌ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್‌ಅಹಮದ್ ಮಾತನಾಡಿ, ಎಸ್.ಐ.ಆರ್‌ಎಂಬುದು ನ್ಯಾಯ ಸಮ್ಮತವಾಗಿಲ್ಲ ಎಂಬುದು ಇತ್ತೀಚಿನ ಚುನಾವಣಾ ಆಯೋಗದ ನಡವಳಿಕೆಗಳಿಂದ ಸಾಭೀತಾಗಿದೆ. ಕಾಂಗ್ರೆಸ್‌ ಯುವಜನರಿಗೆ ಮತದಾನದ ಹಕ್ಕು ನೀಡಿದರೆ, ಬಿಜೆಪಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಸಂವಿಧಾನ ಬದ್ದ ಮತದಾನದ ಹಕ್ಕನ್ನು ಕಸಿಯುವ ಮೂಲಕ ಜನಮತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಇದಕ್ಕೆ ಎಂದಿಗೂ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಪ್ರತಿ ಪ್ರಜೆ ಮತದಾನದ ಹಕ್ಕು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಮಾತನಾಡಿ, ಜ್ಞಾನೇಶಕುಮಾರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯುತ್ತಿದೆ. ಇದು ನಿಜವಾದ ಜನಾಭಿಪ್ರಾಯವಲ್ಲ. ಪ್ರಜಾಪ್ರಭುತ್ವದ ಹಬ್ಬಎನ್ನುವ ಚುನಾವಣೆಯ ಘನತೆ, ಗೌರವಕಾಪಾಡುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್‌ಕಾರ್ಯಕರ್ತರು ಒಗ್ಗೂಡಿ, ಜ್ಞಾನೇಶಕುಮಾರ್‌ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಿದ್ದೇವೆ. ಚುನಾವಣಾ ಆಯೋಗಕ್ಕೆಅಂಟಿರುವ ಕಳಂಕ ತೊಳೆಯಲು ಪ್ರಯತ್ನಿಸುವುದಾಗಿ ತಿಳಿಸಿದರು.

ಮಾಜಿ ಶಾಸಕ ಡಾ.ರಫೀಕ್‌ ಅಹಮದ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೆಂಚಮಾರಯ್ಯ,ಆರ್.ರಾಮಕೃಷ್ಣ, ನರಸೀಯಪ್ಪ, ಹೆಚ್.ಸಿ.ಹನುಮಂತಯ್ಯ, ಕುಮಾರಸ್ವಾಮಿ, ಸಂಜೀವಕುಮಾರ್, ಶ್ರೀನಿವಾಸಕುಮಾರ್, ರಂಗಸ್ವಾಮಯ್ಯ ಸಿದ್ದಾಪುರ,ಇರ್ಫಾನ್ ಅಹಮದ್, ಜಾಕಿರ್ ಪಾಷ,ಸುಜಾತ,ಮೆಹಬೂಬ್ ಪಾಷ, ನಿಂಗರಾಜು, ಆಟೋರಾಜು, ಪಂಚಾಕ್ಷರಯ್ಯ, ಆದಿಲ್, ಸೈಯದ್‌ದಾದಾಫೀರ್, ನಟರಾಜಶೆಟ್ಟಿ,ಕೆಂಪರಾಜು, ಸುರೇಶರಾಜ್, ಭಾಗ್ಯ ಶೇಖರ್, ಸುಮತಿ, ನಾಗಲಕ್ಷ್ಮೀ ,ವಿಜಯಲಕ್ಷ್ಮೀ, ಭಾಗ್ಯಮ್ಮ, ಸಿದ್ದಲಿಂಗೇಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ಶ್ರೀಪರ್ಣಾ ಸಾಹಾಗೆ ಡಾ. ಅಪ್ಪಾಜಿ ನಾವೀನ್ಯತಾ ಪ್ರಶಸ್ತಿ
ಕೃತಕ ಬುದ್ದಿಮತ್ತೆಯ ಸಮರ್ಥ ಬಳಕೆ ಮಾಡಿ