ಜಿರಳೆ ಪಕ್ಷದ ಹೋರಾಟಕ್ಕೆ ಟೀಕಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Aug 01, 2026, 01:30 AM IST
೩೧ಕೆಎಂಎನ್‌ಡಿ-೨ನೀಟ್ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಯುವಕರು ನಡೆಸಿದ ಹೋರಾಟವನ್ನು ನಿಂದಿಸಿರುವ ಸಂಸದೆ ಕಂಗನಾ ರಣಾವತ್ ವಿರುದ್ಧ ಮಂಡ್ಯದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ನಂತರ ಮಾತನಾಡಿದ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಅವರು, ಅತ್ಯಾಚಾರಿಗಳನ್ನು ಬೆಂಬಲಿಸುವ ಹೇಳಿಕೆ ನೀಡಿರುವ ಪ್ರಹ್ಲಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರನ್ನಾಗಿ ನೇಮಿಸಿರುವುದು ಖಂಡನೀಯ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ಮಾಡಿದ ಯುವಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಂಗನಾರವರಿಗೆ ಸಂಸದೆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಯುವಜನತೆ ನಡೆಸಿದ ಪ್ರತಿಭಟನೆಯನ್ನು ಅವಾಚ್ಯ ಶಬ್ದಗಳಿಂದ ಟೀಕಿಸಿದ ಸಂಸದೆ ಕಂಗನಾ ರಣಾವತ್ ಹಾಗೂ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಂತರ ಮಾತನಾಡಿದ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಅವರು, ಅತ್ಯಾಚಾರಿಗಳನ್ನು ಬೆಂಬಲಿಸುವ ಹೇಳಿಕೆ ನೀಡಿರುವ ಪ್ರಹ್ಲಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರನ್ನಾಗಿ ನೇಮಿಸಿರುವುದು ಖಂಡನೀಯ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ಮಾಡಿದ ಯುವಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಂಗನಾರವರಿಗೆ ಸಂಸದೆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ವಿನಾಯಿತಿ ನೀಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಹ್ಲಾದ್ ಜೋಶಿ ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ಶಶಿಕಲಾ ರಾಮಣ್ಣ, ಪದ್ಮ ಮೋಹನ್, ಸುನೀತಾ, ರಾಧಾ ಚಿಕ್ಕಲಿಂಗೇಗೌಡ, ವೀಣಾ ಶಂಕರ್, ಗುಣಲಕ್ಷ್ಮೀ, ಅನುರಾಧ, ಗೀತಾ, ಜಯಲಕ್ಷ್ಮೀ, ಕಾಂಗ್ರೆಸ್ ಮುಖಂಡರಾದ ಅಭಿಲಾಷ್, ಉದಯಕುಮಾರ್, ರವಿಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿಗೆ ಡ್ರೋನ್ ಪ್ರಯೋಗಾಲಯ
ತಮಿಳುನಾಡಿಗೆ ನೀರು ಹರಿಸುವುದು ಬೇಡ