ಬಿಜೆಪಿ ಶಾಸಕರ ಆರೋಪ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Jun 25, 2025, 12:33 AM IST
ಬಿಜೆಪಿ ಶಾಸಕರ ಸುಳ್ಳು ಆರೋಪಗಳ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ಸೋಮವಾರ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಪ್ರಮುಖವಾಗಿ ಮಾತನಾಡಿದ ಮುನಿಯಲು ಉದಯ್ ಕುಮಾರ್ ಶೆಟ್ಟಿ ಅವರು, “ಬಿಜೆಪಿ ಶಾಸಕರಾದ ಸುನೀಲ್ ಕುಮಾರ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ” ಎಂದು ಆರೋಪಿಸಿದರು.ಅವರು ಮುಂದುವರೆದು, “ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ರಕ್ಷಿಸಲು ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸುತ್ತಿದ್ದಾರೆ. ಕಾರ್ಕಳದ ಜನರಿಗೆ ಅನ್ಯಾಯವಾಗುತ್ತಿರುವ ವಿಷಯಗಳಲ್ಲಿ ಧ್ವನಿ ಎತ್ತುವ ಬದಲು, ಅವರು ಜನರ ಗಮನ ಬೇರೆಡೆ ಸೆಳೆಯಲು ನಾಟಕವಾಡುತ್ತಿದ್ದಾರೆ” ಎಂದು ಗುಡುಗಿದರು.ಧರಣಿ ಕಾರ್ಯಕ್ರಮದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, “ಅಕ್ರಮ ಸಕ್ರಮ ಯೋಜನೆ ತಿರಸ್ಕಾರ, ಆಶ್ರಯ ಯೋಜನೆ ಸ್ಥಗಿತ, ಪಿಂಚಣಿ ಯೋಜನೆ ರದ್ದು ಮಾಡಿರುವುದು ಬಿಜೆಪಿ ಸರ್ಕಾರ. ವಿದ್ಯುತ್ ದರ ಏರಿಕೆಯ ಪಿತಾಮಹನಾಗಿ ಸುನೀಲ್ ಕುಮಾರ್ ಬಣ್ಣಸಿಗುತ್ತಾರೆ” ಎಂದು ವ್ಯಂಗ್ಯವಾಡಿದರು.ಹಾಜರಾಗಿದ್ದ ಇತರ ಪ್ರಮುಖ ನಾಯಕರುಗಳಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಕಾಬೆಟ್ಟು, ಪುರಸಭಾ ಸದಸ್ಯ ಉದ್ಯಮಿ ವಿವೇಕಾನಂದ ಶೆಣೈ, ಜಿಲ್ಲಾ ವಕ್ತಾರ ಬಿಪಿನ್ ನಕ್ರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ತಾಲೂಕು ಸೇವಾದಳ ಅಧ್ಯಕ್ಷ ಅಬ್ದುಲ್ಲ ಪುಲ್ಕೆರಿ, ಹಿರಿಯ ಮುಖಂಡ ಸುಂದರ ಸಮಗಾರ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸುಧಾಕರ್ ಶೆಟ್ಟಿ, ಕಾರ್ಯದರ್ಶಿ ಎಮ್. ಪಿ. ಮೊಯಿದಿನ್ ಅಬ್ಬಾ, ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಉದಯ್ ಶೆಟ್ಟಿ ಕುಕ್ಕುಂದೂರ್, ಉಪಾಧ್ಯಕ್ಷ ಜಾರ್ಜ್ ಕಾಸ್ಟಲಿನೋ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.ಪ್ರತಿಭಟನೆಯಲ್ಲಿ ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಮುಖಂಡರು, ಮಾಜಿ ಪುರಸಭಾ ಸದಸ್ಯರು ಹಾಗೂ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಗಮನಸೆಳೆಯಿತು.ReplyForwardAdd reaction | Kannada Prabha

ಸಾರಾಂಶ

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಕಾರ್ಕಳಬಿಜೆಪಿ ಶಾಸಕರ ಸುಳ್ಳು ಆರೋಪಗಳ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ಸೋಮವಾರ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾನೇ ಕೈಗೊಂಡ ನಿರ್ಧಾರಗಳನ್ನು ಮರೆಮಾಚಿ ಸುಳ್ಳು ಆರೋಪಗಳನ್ನು ಹೊರಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಮುಖಂಡನನ್ನು ರಕ್ಷಿಸಲು ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸುತ್ತಿದ್ದಾರೆ. ಕಾರ್ಕಳದ ಜನರಿಗೆ ಅನ್ಯಾಯವಾಗುತ್ತಿರುವ ವಿಷಯಗಳಲ್ಲಿ ಧ್ವನಿ ಎತ್ತುವ ಬದಲು, ಅವರು ಜನರ ಗಮನ ಬೇರೆಡೆ ಸೆಳೆಯಲು ನಾಟಕವಾಡುತ್ತಿದ್ದಾರೆ ಎಂದರು.ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಅಕ್ರಮ ಸಕ್ರಮ ಯೋಜನೆ ತಿರಸ್ಕಾರ, ಆಶ್ರಯ ಯೋಜನೆ ಸ್ಥಗಿತ, ಪಿಂಚಣಿ ಯೋಜನೆ ರದ್ದು ಮಾಡಿರುವುದು ಬಿಜೆಪಿ ಸರ್ಕಾರ ಎಂದು ವ್ಯಂಗ್ಯವಾಡಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಕಾಬೆಟ್ಟು, ಪುರಸಭಾ ಸದಸ್ಯ ಉದ್ಯಮಿ ವಿವೇಕಾನಂದ ಶೆಣೈ, ಜಿಲ್ಲಾ ವಕ್ತಾರ ಬಿಪಿನ್ ನಕ್ರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ತಾಲೂಕು ಸೇವಾದಳ ಅಧ್ಯಕ್ಷ ಅಬ್ದುಲ್ಲ ಪುಲ್ಕೆರಿ, ಹಿರಿಯ ಮುಖಂಡ ಸುಂದರ ಸಮಗಾರ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸುಧಾಕರ್ ಶೆಟ್ಟಿ, ಕಾರ್ಯದರ್ಶಿ ಎಂ.ಪಿ. ಮೊಯ್ದೀನ್‌ ಅಬ್ಬಾ, ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಉದಯ್ ಶೆಟ್ಟಿ ಕುಕ್ಕುಂದೂರ್, ಉಪಾಧ್ಯಕ್ಷ ಜಾರ್ಜ್ ಕಾಸ್ಟಲಿನೋ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಮುಖಂಡರು, ಮಾಜಿ ಪುರಸಭಾ ಸದಸ್ಯರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!