)
ಕನ್ನಡಪ್ರಭ ವಾರ್ತೆ ಬೆಂಗಳೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ್‍ಯಾಲಿ ನಡೆಸಿದ ಜಾಗ ಶುದ್ಧೀಕರಣ ನಡೆಸಿದ್ದ ಮನುವಾದಿಗಳ ಕ್ರಮ ಖಂಡಿಸಿದ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಉತ್ತರಾಖಂಡದಲ್ಲಿ ದಾಖಲಾದ ಎಫ್‌ಐಆರ್ ಕೇವಲ ರಾಹುಲ್ ಗಾಂಧಿ ಮೇಲೆ ಅಲ್ಲ. ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹೂಡಿದ ಕೇಸ್ ಎಂದು ಭಾವಿಸಿ ಪ್ರತಿಭಟನೆ ನಡೆಸಬೇಕು. ಎಲ್ಲ ಜಿಲ್ಲೆ, ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಬೇಕು ಎಂದು ತೀರ್ಮಾನಿಸಲಾಯಿತು.ಬಿಜೆಪಿ ಕೊನೆಗಾಲ ಹತ್ತಿರ-ಸಿಎಂ:
‘ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಹೋರಾಟಗಾರನಾಗಿ ಬದುಕುತ್ತಿದ್ದು, ಹೋರಾಟಗಾರನಾಗಿಯೇ ಸಾಯುತ್ತಾರೆ. ಇಂಥ ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಇಂಥ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೆಯನ್ನೂ ಕೇಳಲ್ಲ. ಈ ಕ್ರಮಕ್ಕೆ ನ್ಯಾಯಾಲಯವೇ ಬಿಜೆಪಿಗೆ ಛೀಮಾರಿ ಹಾಕಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲು ಮಾಡಿರುವುದು ಘೋರ ಅಪರಾಧ. ಇದರ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ಆಗಬೇಕು ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎಲ್ಲ ಜಿಲ್ಲೆಗಳಲ್ಲಿ ನಡೆಸಲಾಗುವುದು’ ಎಂದರು.