ಹುಬ್ಬಳ್ಳಿ:
ಇಲ್ಲಿನ ರೈಲ್ವೆ ನಿಲ್ದಾಣ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದು ಆರೋಪಿಸಿದರು.ಹಿಂದುಳಿದ ಸಮುದಾಯದ ಪ್ರಬಲ ನಾಯಕ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಸತೀಶ ಜಾರಕಿಹೊಳಿ ಅವರ ರಾಜಕೀಯ ಏಳ್ಗೆಯನ್ನು ಸಹಿಸದ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರು ಇಡಿ ಮೂಲಕ ದಾಳಿ ನಡೆಸಿ ಭಯದ ವಾತಾವರಣ ಸೃಷ್ಟಿಸುವ ಹಾಗೂ ಅವರ ವರ್ಚಸ್ಸು ಕುಗ್ಗಿಸುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಆರೀಫ್ ಭದ್ರಾಪುರ, ಮುಖಂಡರಾದ ಗಂಗಾಧರ ದೊಡವಾಡ, ಶಿವಾನಂದ ಮುತ್ತಣ್ಣವರ, ಸಿದ್ಧಾರ್ಥ ಡಂಬಳ, ಪ್ರಕಾಶ ಕುರಹಟ್ಟಿ, ಶಿವಾನಂದ ಬೆಂತೂರ, ಇಮ್ತಿಯಾಜ್ ಕುಮಾಟಕರ, ಸುಭಾಷ್ ಗೌಡಪ್ಪನವರ, ರಾಜು ದೊಡಶಂಕರ, ಶಂಭಯ್ಯ ನೀರಲಗಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.