ಹೊಸಪೇಟೆ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿದ್ದು, ಜಿರಾಮ್‌ಜಿ ಯೋಜನೆ ಜಾರಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಲಿದ್ದು, ವಿಶೇಷ ಅಧಿವೇಶನ ಕರೆದು ಕೂಡ ಚರ್ಚಿಸಲಾಗುವುದು. ಜೊತೆಗೆ ಹೋರಾಟ ನಡೆಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಕ್ ಮಾತನಾಡಿ, ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿದಲ್ಲದೇ, ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆರ್ಥಿಕ ಹೊರೆ ಹೊರೆಸುತ್ತಿದೆ ಎಂದರು.
ಶಾಸಕರಾದ ಎಂ.ಪಿ. ಲತಾ, ಜೆ.ಎನ್. ಗಣೇಶ, ಭರತ್ ರೆಡ್ಡಿ, ಹುಡಾ ಅಧ್ಯಕ್ಷ ಎಚ್‌ಎನ್‌ಎಫ್ ಇಮಾಮ್, ಮುಖಂಡರಾದ ಕೆ.ಎಂ. ಹಾಲಪ್ಪ, ವಿನಾಯಕ ಶೆಟ್ಟರ್ ಮತ್ತಿತರರಿದ್ದರು.ಹೊಸಪೇಟೆಯಲ್ಲಿ ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.