-ಅಂಚೆ ಕಚೇರಿಗೆ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ। ಪೊಲೀಸರು, ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ । ಲಘು ಲಾಠಿ ಪ್ರಹಾರ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಾರಿನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರಿಗೂ ಮತ್ತು ಪ್ರತಿಭಟನಕಾರರಿಗೆ ಮಾತಿನ ಚಕಮಕಿ, ಲಘು ಲಾಠಿ ಪ್ರಹಾರ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮುಂದುವರಿಸಿದೆ. ಇವರ ಒಡೆತನದಲ್ಲಿ ಇರುವ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನೇ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದು, ಈಗಾಗಲೇ ಸೋನಿಯಾಗಾಂಧಿ, ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿದೆ. ಇದನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ ಎಂದರು.
ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
--
ಬಿ.ವೈ.ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ
--
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಾರಿನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು.
------------------------ಪೋಟೋ: 15ಎಸ್‌ಎಂಜಿಕೆಪಿ08
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಕೆ.ರಂಗನಾಥ್ ಹಾಗೂ ಎಚ್.ಪಿ. ಗಿರೀಶ್ ಅವರ ನೇತೃತ್ವದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.