ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Feb 08, 2026, 01:15 AM IST
ಮನರೇಗಾ ಕಾಯ್ದೆ ಹೆಸರು ಬದಲಾವಣೆ ವಿರೋಧಿಸಿ ಪ್ರತಿಭಟನೆ | Kannada Prabha

ಸಾರಾಂಶ

ಚಿಕ್ಕಮಗಳೂರುಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ( ಮನರೇಗಾ) ಹೆಸರು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ನಗರದ ಗಾಂಧಿ ಪ್ರತಿಮೆ ಎದುರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಹೋರಾಟಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ( ಮನರೇಗಾ) ಹೆಸರು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ನಗರದ ಗಾಂಧಿ ಪ್ರತಿಮೆ ಎದುರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಒಳಸಂಚು ನಡೆಸಿ ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೆ ತಂದ ಯೋಜನೆಗೆ ಮರುನಾಮಕರಣ ಮಾಡುತ್ತಿದೆ. ಆ ಯೋಜನೆ ಹೆಸರು ಬದಲಾವಣೆ ಸಂಬಂಧ ಕಾಂಗ್ರೆಸ್ ನವರ ಪ್ರಶ್ನೆಗೆ ಬಿಜೆಪಿ ನಾಯಕರಲ್ಲಿ ಸಮರ್ಪಕ ಉತ್ತರವೇ ಇಲ್ಲದಂತಾಗಿದೆ ಎಂದು ಟೀಕಿಸಿದರು.ಮನರೇಗಾ ಯೋಜನೆ ಬಡವರ ಸ್ವಾಭಿಮಾನವನ್ನು ಹೆಚ್ಚಿಸಿತ್ತು. ಕೆಲಸ ಇಲ್ಲದವರಿಗೆ ಉದ್ಯೋಗ ನೀಡುವ ಮೂಲಕ ಕೂಲಿ ಕಾರ್ಮಿಕರಿಗೆ ಆಶಾದಾಯಕವಾಗಿತ್ತು. ಬಿಜೆಪಿಯಿಂದಲೇ ದೇಶದ ಅಭಿವೃದ್ಧಿ ಎಂದು ಸುಳ್ಳು ಹೇಳುತ್ತಾ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸರಿಯಾದ ಮಾಹಿತಿ ನೀಡಲು ಗ್ರಾಮೀಣ ಮಟ್ಟದಿಂದ ಜಾಗೃತಿ ಮೂಡಿಸಬೇಕು ಎಂದರು.

ಗಾಂಧಿಜೀ ತತ್ವ ಧಿಕ್ಕರಿಸಿ, ತಾತ್ಸಾರ ಮಾಡುವ ಬಿಜೆಪಿಗರು ಎಲ್ಲವನ್ನೂ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಇನ್ನೊಂದೆಡೆ ಪಂಚ ಗ್ಯಾರಂಟಿ ಯೋಜನೆ ಸರಿಯಲ್ಲವೆಂದು ಹೇಳಿಕೆ ನೀಡಿದೆ. ಆದರೆ ದೇಶದ ಬಹುತೇಕ ರಾಜ್ಯಗಳಲ್ಲಿ ಕರ್ನಾಟಕ ಪಂಚ ಗ್ಯಾರಂಟಿ ಯೋಜನೆ ಬಳಸಿಕೊಂಡು, ಮೋಸದಿಂದ ಚುನಾವಣೆ ಗೆಲ್ಲುತ್ತಿದೆ ಎಂದು ಆರೋಪಿಸಿದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲಘಟ್ಟದಲ್ಲಿ ಜಾರಿಗೆ ಬಂದ ಮನರೇಗಾ ಯೋಜನೆ ಗ್ರಾಮೀಣ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ರೂಪಿಸಲಾಗಿದೆ. ಬಡವರು, ದೀನ ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸ್ವಾಭಿಮಾನದ ಬದುಕನ್ನು ನಡೆಸಲು ಅನುವಾಗುವಂತೆ ಗಾಂಧೀಜಿ ಹೆಸರಿನಲ್ಲಿ ಸ್ಥಾಪಿಸಿದ ಈ ಯೋಜನೆ ಬದಲಿಸಲು ಹೊರಟಿರುವುದು ಸರಿಯಲ್ಲ ಎಂದರು. ಮನರೇಗಾದಡಿ ದೇಶದ ಸುಮಾರು ೩೮ ಕೋಟಿ ಜನಸಂಖ್ಯೆ ಅರ್ಜಿ ಕಾರ್ಡ್ ಹೊಂದಿದ್ದು ಕೋಟ್ಯಂತರ ಜನ ಈ ಇದರಿಂದ ಉದ್ಯೋಗ ಪಡೆದುಕೊಂಡಿದ್ದಾರೆ. ಹಳ್ಳಿ ಜನರ ಬದುಕಾಗಿದ್ದ ಮನರೇಗ ಬದಲಿಸುವ ಮೂಲಕ ಕೇಂದ್ರ ಸರ್ಕಾರ ಗ್ರಾಮೀಣ ರಿಗೆ ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿದರು.ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿಪಡಿಸುವ ಉದ್ದೇಶದಿಂದ ತಂದಿದ್ದ ಮನರೇಗಾ ಬದಲಿಗೆ ಹೊಸ ಮಸೂದೆ ಜಾರಿಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದ್ದು ದುರಂತ. ಈ ಮಸೂದೆಯು ಮನರೇಗಾ ಮತ್ತು ಅದರಲ್ಲಿದ್ದ ಉದ್ಯೋಗದ ಶಾಸನಬದ್ಧ ಖಾತ್ರಿ ತೆಗೆದು ಹಾಕಿ, ಗ್ರಾಮೀಣ ಬಡ ಕುಟುಂಬ ಗಳಿಗೆ ಉದ್ಯೋಗದ ಭರವಸೆ ಇಲ್ಲವಾಗಿಸುತ್ತದೆ ಎಂದು ತಿಳಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ ಕೇಂದ್ರ ಸರ್ಕಾರ ಸದಾ ಉಳ್ಳವರ ಪರವೇ ಕೆಲಸ ಮಾಡುತ್ತದೆ. ಈ ಹಾದಿಯಲ್ಲೇ ಇದೀಗ ಮನರೇಗಾ ಯೋಜನೆಯನ್ನು ಬದಲಿಸಿ ವಿಬಿ- ಜಿ ರಾಮ್ ಜಿ ಎಂದು ಮಡುವ ಮೂಲಕ ಕೆಲವೊಂದು ಬದಲಾವಣೆ ತಂದಿದೆ. ಈ ಬದಲಾವಣೆಗಳು ಕೂಲಿಕಾರರ ಹೊಟ್ಟೆ ಮೇಲೆ ಬರೆ ಎಳೆದಂತಿದೆ ಎಂದು ಆರೋಪಿಸಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೈಬಿಟ್ಟು ಹೊಸ ಕಾಯ್ದೆ ಜಾರಿಗೊಳಿಸಿರುವುದು ಸರಿಯಲ್ಲ. ಶ್ರೀಮಂತರಿಗೆ ಅನುಕೂಲವಾಗುವಂಥ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವುದು ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ರೈತರ ಜೀವನಕ್ಕೆ ಮಾರಕವಾಗಿದೆ ಎಂದರು.ಪ್ರತಿಭಟನೆಯಲ್ಲಿ ಶಾಸಕದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್, ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್ ಕುಮಾರ್, ರೇಖಾಹುಲಿಯಪ್ಪಗೌಡ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ತಾಲೂಕು ಗ್ಯಾರಂಟಿ ಅಧ್ಯಕ್ಷ ಎಂ.ಮಲ್ಲೇಶ್, ನಗರಸಭೆ ನಾಮಿನಿ ಸದಸ್ಯರಾದ ಕೀರ್ತಿಶೇಟ್, ಪ್ರಕಾಶ್ ರೈ, ಜಿ.ಪಂ. ಮಾಜಿ ಸದಸ್ಯ ಕೆ.ವಿ. ಮಂಜುನಾಥ್, ಮುಖಂಡರಾದ ತನೋಜ್ ನಾಯ್ಡು, ಹಿರೇಮಗಳೂರು ರಾಮಚಂದ್ರ, ಲಕ್ಷ್ಮಣ್, ಲಾಕೇಶ್ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕರಿಗೆ ಐಪಿಎಲ್‌ 3 ಟಿಕೆಟ್ ಫ್ರೀ
ಲೆಕ್ಕಕ್ಕಿಲ್ಲದ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಇಂದು