ಹೂವಿನಹಡಗಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ, ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಸೋಮವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಮಾತನಾಡಿ, ಜಮ್ಮು-ಕಾಶ್ಮೀರದಲ್ಲಿ ಅಮಾಯಕ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿರುವುದು ಖಂಡನೀಯ. ಭಯೋತ್ಪಾದನೆ ಸದೆ ಬಡಿಯುವ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ. ದಾಳಿ ನಡೆಸಿದ ಉಗ್ರರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಟವಾಳಗಿ ಕೊಟ್ರೇಶ, ಬಿ. ಹನುಮಂತಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ವಿಜಯಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಪಾಟೀಲ್ ಬಸವನಗೌಡ, ಮುಖಂಡರಾದ ಸೋಗಿ ಹಾಲೇಶ, ಜಿ. ವಸಂತ, ಯು. ಹನುಮಂತಪ್ಪ, ಕೆ. ಗೌಸ್ ಮೊಹಿದ್ದೀನ್ ಇತರರಿದ್ದರು.