ಕನ್ನಡಪ್ರಭ ವಾರ್ತೆ ಗುಡಿಬಂಡೆ
ಇದಕ್ಕೆ ಮುನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗೂತ್ತಾ, ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಬೆಲೆ ಏರಿಕೆಗೆ ಕೇಂದ್ರ ಕಾರಣಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೇಶವರೆಡ್ಡಿ ಮಾತನಾಡಿ, ಪ್ರಧಾನಿಗಳು ಬೆಲೆ ಏರಿಕೆ ಮಾಡೋದನ್ನು ನಿಲ್ಲಿಸಲಿ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೇಂದ್ರದ ಜನವಿರೋಧಿ ನೀತಿಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಬಿಜೆಪಿ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದೆ ಅಂತಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ ಬೆಲೆ ಏರಿಕೆ ಮಾಡುತ್ತಿರೋದು ಕೇಂದ್ರ ಬಿಜೆಪಿ ಸರ್ಕಾರ ಎಂದರು.
ಕೇಂದ್ರ ಸರ್ಕಾರ ಜನವಿರೋಧಿ
ತೈಲ ದರದಿಂದ ಹಿಡಿದು ಎಲ್ಲಾ ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಜೀವನ ನಡೆಸುವುದು ದುಸ್ತರವಾಗಿದೆ. ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹಾಗೂ ನಿರುದ್ಯೋಗ ಹೆಚ್ಚಾಗುತ್ತದೆ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುತ್ತಿದೆ. ಇದನ್ನು ಸಹಿಸದ ಬಿಜೆಪಿ, ಕಾಂಗ್ರೆಸ್‌ಗೆ ಕಪ್ಪು ಚುಕ್ಕೆ ತರಲು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದರು.
ಗುಡಿಬಂಡೆ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಹಸೀಲ್ದಾರ್ ಸಿಗ್ಬತ್ತುಲ್ಲಾ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ, ಕಾಂಗ್ರೇಸ್ ಪಕ್ದದ ಹಿರಿಯ ಮುಖಂಡರಾದ ರಘುನಾಥರೆಡ್ಡಿ, ಕೃಷ್ಣೆಗೌಡ, ರಾಜ್ಯ ಯುವ ಕಾಂಗ್ರೇಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್, ಯೂತ್ ಕಾಂಗ್ರೇಸ್ ಮುಖಂಡರಾದ ನವೀನ್, ಅಂಬರೀಶ್, ಪಪಂ ಅಧ್ಯಕ್ಷ ವಿಕಾಸ್, ಕಾಂಗ್ರೇಸ್ ಪಕ್ಷದ ಮುಖಂಡರಾದ ರಿಯಾಜ್, ಇಸ್ಮಾಯಿಲ್ ಆಜಾದ್ ಬಾಬು, ಪ್ರಕಾಶ್, ನಯಾಜ್ ಸೇರಿದಂತೆ ಹಲವರು ಹಾಜರಿದ್ದರು.