- ಉತ್ತರಾಖಂಡ ರಾಜ್ಯದ ಹಲದ್ವಾನಿ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆ ಬಳಿ ಸ್ಥಳ ಶುದ್ಧೀಕರಣ ನಡೆಗೆ ಆಕ್ರೊಶಕನ್ನಡಪ್ರಭ ವಾರ್ತೆ ಯಾದಗಿರಿ
ಈ ಸಂದರ್ಭದಲ್ಲಿ ಮಾತನಾಡಿದ ರಾಯಚೂರು ಲೋಕಸಭಾ ಸದಸ್ಯ ಜಿ. ಕುಮಾರನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ ಇತರ ನಾಯಕರು, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಶ್ರಮ ಅಗಾಧವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದ ಚೌಕಟ್ಟಿನಲ್ಲಿಯೇ ದೇಶದ ಆಡಳಿತ ನಡೆದುಕೊಂಡು ಬಂದಿದೆ, ಆದರೆ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ಜಾತಿ, ಧರ್ಮಗಳ ಮಧ್ಯೆ ಒಡಕು ಮೂಡಿಸಿ, ದೇಶದಲ್ಲಿ ಅಶಾಂತಿ ಮೂಡಿಸಿ ಸಾಮರಸ್ಯ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಪ್ರಗತಿಗೆ ಡಾ.ಖರ್ಗೆಯವರು ನೀಡಿರುವ ಕೊಡುಗೆ ಅಪಾರ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಸಂವಿಧಾನದ 371 (ಜೆ) ಕಾಲಂ ತಿದ್ದುಪಡಿ ತರುವ ಮೂಲಕ ಸರ್ವರಿಗೂ ಬದಲಾವಣೆಗೆ ಅವಕಾಶ ಕಲ್ಪಿಸಿದ್ದಾರೆ, ಅಂತಹ ಮಹಾನ್ ವ್ಯಕ್ತಿಯನ್ನು ಕೆಲವು ಪಟ್ಟಭದ್ರ ಹಿಂದುಪರ ಸಂಘಟನೆಗಳ ಕಾರ್ಯ ಕರ್ತರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೂಡ ಅವಮಾನ ಮಾಡಿರುವುದು ಘೋರ ಅಪರಾಧ, ಉತ್ತರಾಖಂಡ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸದರು.ದೇಶದ ಪ್ರಜಾಪ್ರಭುತ್ವದ ದೇಗುಲವಾಗಿರುವ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಡಾ.ಖರ್ಗೆಯವರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಮೂಲಕ ದೇಶದ ಜನರಿಗೆ ವಾಸ್ತವಿಕತೆ ತಿಳಿಸುವ ಮೂಲಕ ತಮ್ಮ ಸಾಮರ್ಥ್ಯ ಏನೆಂಬುದು ತೋರಿಸಿಕೊಟ್ಟಿದ್ದಾರೆ, ಕಳೆದ 19 ದಿನಗಳಿಂದ ನಡೆದ ಲೋಕಸಭೆ ಅಧಿವೇಶನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ ಅವರು ಕೇಂದ್ರ ಸರ್ಕಾರದ ವೈಫಲ್ಯಗಳಿಗೆ ವಿರೋಧ ಪಕ್ಷಗಳ ನಾಯಕರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೇ ಗೈರು ಆಗುವ ಮೂಲಕ ಮಹತ್ವದ ವಿಷಯಗಳ ಚರ್ಚೆ ನಡೆಯಲು ಅವಕಾಶ ನೀಡದೇ ಸದನದ ಸಮಯ ಹಾಳು ಮಾಡಿದ್ದಾರೆಂದು ತರಾಟೆಗೆ ತೆಗೆದುಕೊಂಡರು.
ಪ್ರತಿಭಟನೆಯಲ್ಲಿ ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ, ಜಿಲ್ಲಾಧ್ಯಕ್ಷ ಮರೆಪ್ಪ ಬಿಳ್ಹಾರ, ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗಾರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಮಸನ್ ಮಾಳಿಕೇರಿ, ಗುಂಡಪ್ಪ ಸೊಲ್ಲಾಪೂರ, ಸುದರ್ಶನ ನಾಯಕ, ಶೇಖರ ದೊರೆ ಸುರಪುರ, ಚಿದಾನಂದಪ್ಪ ಕಾಳೆಬೆಳಗುಂದಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಈಟಿ, ಗ್ರಾಮೀಣ ಘಟಕದ ಅಧ್ಯಕ್ಷ ಲಕ್ಷö್ಮರಡ್ಡಿ, ಬಾಷುಮೀಯ ವಡಗೇರಾ, ಭೀಮರಾಯ ಠಾಣಾಗುಂದಿ, ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್, ಹಣಮಂತ ಲಿಂಗೇರಿ, ಸುರೇಶ ಮಡ್ಡಿ, ಲಕ್ಷ್ಮಣ ರಾಠೋಡ, ಪದ್ಮಾವತಿ, ರೇಣುಕಾ, ಹೊನ್ನೇಶ ಬಳಿಚಕ್ರ, ಸಂಜೀವಕುಮಾರ ಕಾವಲಿ, ರಾಘವೇಂದ್ರ ಮಾನಸಗಲ್, ಕಳಸಪ್ಪ ಸಾವೂರ, ಮಾಳಿಂಗರಾಯ ಅನಕಸೂಗುರ, ತಿಮ್ಮಣ್ಣ ನಾಯಕ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
14ವೈಡಿಆರ್6 : ಉತ್ತರಾಖಂಡ ರಾಜ್ಯದ ಹಲದ್ವಾನಿ ರಾಮಲೀಲಾ ಮೈದಾನದಲ್ಲಿ ನಡೆದ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದ ಸಾರ್ವಜನಿಕ ಸಭೆಯ ನಂತರ ಮರುದಿನ ರಾಮಭಕ್ತರ ಗುಂಪು ಆ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಣ ಮಾಡಿರುವ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.