ಕನ್ನಡಪ್ರಭ ವಾರ್ತೆ ಬಳ್ಳಾರಿ
ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. ವಿನಾಕಾರಣ ಕಾಂಗ್ರೆಸ್ ಸಚಿವರನ್ನು ಗುರಿಯಾಗಿಸಿಕೊಂಡು ಛಲವಾದಿ ನಾರಾಯಣಸ್ವಾಮಿ ಅಪಮಾನಕಾರಿಯಾಗಿ ಮಾತನಾಡಿದ್ದಾರೆ. ಶಾಸಕರಾಗಿ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ರವಿಕುಮಾರ್ ಅವರು ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನಿ ಎಂದಿದ್ದಾರೆ. ಈ ಇಬ್ಬರ ಹೇಳಿಕೆಗಳು ಅತ್ಯಂತ ಖಂಡನೀಯ. ಕೂಡಲೇ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಶಾಸಕ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿದರು. ಮೇಯರ್ ಮುಲ್ಲಂಗಿ ನಂದೀಶ್, ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಕಾಂಗ್ರೆಸ್ ಮುಖಂಡರಾದ ಜಗನ್, ಕೆ.ಹೊನ್ನಪ್ಪ, ಗುಂಡ್ಲು ರವಿಕುಮಾರ್, ಪರ್ವಿನ್ ಬಾನು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ತಲುಪಿ, ಮನವಿ ಸಲ್ಲಿಸಿದರು.