ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Oct 09, 2026, 01:30 AM IST
8ಎಚ್ಎಸ್ಎನ್3 :  | Kannada Prabha

ಸಾರಾಂಶ

ಪ್ರತಿಭಟನೆಯಲ್ಲಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ಸ್ವಾತಂತ್ರ್ಯ ದೊರೆತು ೭೯ ವರ್ಷಗಳಾದರೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆ ಹಕ್ಕಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗಬಾರದು. ಮತದಾರರು ತಮ್ಮ ಮತದಾನದ ಹಕ್ಕಿನ ಮೂಲಕವೇ ಸರ್ಕಾರಗಳನ್ನು ಆಯ್ಕೆ ಮಾಡುತ್ತಾರೆ. ಹೀಗಾಗಿ ಮತದಾರರ ಪಟ್ಟಿಯಿಂದ ಅರ್ಹ ವ್ಯಕ್ತಿಗಳ ಹೆಸರುಗಳನ್ನು ಕೈಬಿಡುವ ಯಾವುದೇ ಕ್ರಮವನ್ನು ಪಾರದರ್ಶಕವಾಗಿ ಹಾಗೂ ಕಾನೂನುಬದ್ಧವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮತದಾರರ ಹಕ್ಕುಗಳ ರಕ್ಷಣೆ, ಎಸ್‌ಐಆರ್‌ ರದ್ದುಪಡಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಪಕ್ಷಗಳು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.

‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ ದೇಶ ಬಚಾವೋ’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯು ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಆರಂಭಗೊಂಡು ಎನ್. ಆರ್‌. ವೃತ್ತದವರೆಗೆ ಸಾಗಿತು. ಪ್ರತಿಭಟನಾಕಾರರು ಎನ್. ಆರ್‌. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಬಿ. ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದತ್ತ ತೆರಳಿದರು.ಪ್ರತಿಭಟನೆಯಲ್ಲಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ಸ್ವಾತಂತ್ರ್ಯ ದೊರೆತು ೭೯ ವರ್ಷಗಳಾದರೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆ ಹಕ್ಕಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗಬಾರದು. ಮತದಾರರು ತಮ್ಮ ಮತದಾನದ ಹಕ್ಕಿನ ಮೂಲಕವೇ ಸರ್ಕಾರಗಳನ್ನು ಆಯ್ಕೆ ಮಾಡುತ್ತಾರೆ. ಹೀಗಾಗಿ ಮತದಾರರ ಪಟ್ಟಿಯಿಂದ ಅರ್ಹ ವ್ಯಕ್ತಿಗಳ ಹೆಸರುಗಳನ್ನು ಕೈಬಿಡುವ ಯಾವುದೇ ಕ್ರಮವನ್ನು ಪಾರದರ್ಶಕವಾಗಿ ಹಾಗೂ ಕಾನೂನುಬದ್ಧವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ-೭ ಸೇರಿದಂತೆ ವಿವಿಧ ಅರ್ಜಿಗಳ ಮೂಲಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಸಂಬಂಧಪಟ್ಟ ಮತದಾರರಿಗೆ ಸೂಕ್ತ ಮಾಹಿತಿ ನೀಡಿ, ಕಾನೂನುಬದ್ಧ ಪರಿಶೀಲನೆ ನಡೆಸಿದ ನಂತರವೇ ಯಾವುದೇ ಹೆಸರನ್ನು ಕೈಬಿಡಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಹೇಳಿದರು. ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ದುರ್ಬಲ ವರ್ಗಗಳ ಮತದಾರರು ಎಸ್‌ಐಆರ್ ಪ್ರಕ್ರಿಯೆಯಿಂದ ತೊಂದರೆಗೊಳಗಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದ್ದು, ಚುನಾವಣಾ ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಉಳಿಯಬೇಕಾದರೆ ಸಂಪೂರ್ಣ ಪಾರದರ್ಶಕತೆ ಅಗತ್ಯ ಎಂದು ಪಟೇಲ್ ಶಿವಪ್ಪ ಹೇಳಿದರು.

ಪ್ರಜಾಪ್ರಭುತ್ವ ಹಾಗೂ ಮತದಾರರ ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ. ಈ ಹೋರಾಟ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗದೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಕ್ಷಣೆಯ ಹೋರಾಟವಾಗಬೇಕು. ಎಸ್‌ಐಆರ್‌ ವಿರುದ್ಧ ವಿವಿಧ ಪಕ್ಷಗಳು ಮತ್ತು ಸಂಘಟನೆಗಳನ್ನು ಒಳಗೊಂಡ ಹೋರಾಟ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂದು ತಿಳಿಸಿದರು.ಸಿಪಿಐ(ಎಂ) ಮುಖಂಡ ಧರ್ಮೇಶ್ ಮಾತನಾಡಿ, ಇಂಡಿಯಾ ಒಕ್ಕೂಟದ ಭಾಗವಾಗಿ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳು ಎಸ್‌ಐಆರ್ ವಿರುದ್ಧ ಹೋರಾಟ ನಡೆಸುತ್ತಿವೆ. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದರು. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಬೂತ್ ಮಟ್ಟದಲ್ಲಿ ಏಜೆಂಟರನ್ನು ನೇಮಿಸುವುದು ಸಾಮಾನ್ಯ. ಆದರೆ ಚುನಾವಣಾ ಆಯೋಗದ ಕಾರ್ಯವೈಖರಿಯೇ ಬಿಜೆಪಿ ಪರವಾಗಿದೆ ಎಂಬ ಅನುಮಾನ ಮೂಡುವಂತಹ ಬೆಳವಣಿಗೆಗಳು ನಡೆಯುತ್ತಿವೆ ಎಂದು ದೂರಿದರು. ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು ಸೇರಿದಂತೆ ಬಿಜೆಪಿ ವಿರೋಧಿ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿದರು. ಚುನಾವಣಾ ಆಯೋಗ ಸಂವಿಧಾನಬದ್ಧ ಸ್ವಾಯತ್ತ ಸಂಸ್ಥೆಯಾಗಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೂ ಸಮಾನವಾಗಿ ನಡೆದುಕೊಳ್ಳಬೇಕು. ಆಯೋಗದ ನಿಷ್ಪಕ್ಷಪಾತತೆ ಕುರಿತು ಮೂಡಿರುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಬೇಕು. ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಧರ್ಮೇಶ್ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಬಿ.ಪಿ. ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ರಂಜಿತ್ ಗೊರೂರು, ಜೆಸಿಬಿ ಚಂದ್ರು, ರಘು ದಾಸರಕೊಪ್ಪಲು, ಜಿಲ್ಲಾ ವಕ್ತಾರ ಮಂಜುನಾಥ್ ಶರ್ಮ, ಸಿಪಿಐ(ಎಂ) ಮುಖಂಡ ಎಚ್ ಆರ್ ನವೀನ್ ಕುಮಾರ್‌, ಸಿಪಿಐನ ಎಂ.ಸಿ. ಡೋಂಗ್ರೆ, ಎಂ. ಜಿ. ಪೃಥ್ವಿ, ಸಲೀಂ ಕೊಲ್ಲಹಳ್ಳಿ, ಲಕ್ಷ್ಮಣ್, ಪ್ರಕಾಶ್, ಪರ್ವೀಸ್ ಪಾಷಾ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

===

ಹೇಳಿಕೆ.

ಸ್ವಾತಂತ್ರ್ಯ ದೊರೆತು ೭೯ ವರ್ಷಗಳಾದರೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು.

- ಪಟೇಲ್ ಶಿವಪ್ಪ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಫೋಟೋ ಶೀರ್ಷಿಕೆ:

ಎಸ್‌ಐಆರ್‌ ರದ್ದುಪಡಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಪಕ್ಷಗಳು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಗಿರಿಯಲ್ಲಿ ಫ್ರೀ ಫೈರ್‌ ಗೇಮ್‌ಗೆ ಅಪ್ರಾಪ್ತ ಬಲಿ!
ವಿರಾಟ್ ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ