ಕನ್ನಡಪ್ರಭ ವಾರ್ತೆ ನಂಜನಗೂಡು
ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಜಮಾವಳಿಗೊಂಡ ಕಾಂಗ್ರೆಸ್ ಕಾರ್ಯಕರ್ತರು. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು, ಮಾನವ ಸರಪಳಿ ನಿರ್ಮಿಸಿ, ಅಮಿತ್ ಷಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ರಕ್ಷಣಾ ಮಂತ್ರಿಯಾಗಿ ಎಲ್ಲ ಜನರಿಗೂ ರಕ್ಷಣೆ ನೀಡುವ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಅಂಬೇಡ್ಕರ್ ಅವರ ಸಂವಿಧಾನದಡಿ ಅವರು ಗೃಹ ಸಚಿವರಾಗಿದ್ದಾರೆ ಎಂಬುದನ್ನು ಮರೆತಿರುವಂತಿದೆ. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಆದ್ದರಿಂದ ಈ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್ ಮಾತನಾಡಿದರು.
ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದ ಪರಿಣಾಮ ಸಂಚಾರದಟ್ಟಣೆ ಅಧಿಕವಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.ಉಪ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಜಿಪಂ ಮಾಜಿ ಸದಸ್ಯರಾದ ಕೆ. ಮಾರುತಿ, ಪುಷ್ಪನಾಗೇಶ್ ರಾಜ್, ಲತಾ ಸಿದ್ದಶೆಟ್ಟಿ, ಮುಖಂಡರಾದ ದೊರೆಸ್ವಾಮಿ, ವಿಜಯಕುಮಾರ್, ಮುದ್ದುಮಾದಶೆಟ್ಟಿ, ಶ್ರೀನಿವಾಸಮೂರ್ತಿ, ರವಿಪ್ರಕಾಶ್, ಶಿವಣ್ಣ, ರಂಗದಾಸ್, ಅಶೋಕ್, ನಾಗರಾಜು, ಜಯರಾಮು, ರಾಜೇಶ, ನಾಯಕ, ಅಜ್ಗರ್, ನಗರಸಭಾ ಸದಸ್ಯರಾದ ಪ್ರದೀಪ್, ಎಸ್.ಪಿ. ಮಹೇಶ್, ಗಂಗಾಧರ್, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ತಾಪಂ ಮಾಜಿ ಸದಸ್ಯ ಕೆ. ಮೂಗಶೆಟ್ಟಿ, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.