ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಾನುವಾರ ಬೆಳಿಗ್ಗೆ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರ ಮತಯಾಚನೆ ನಡೆಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ಖಾತರಿ ಯೋಜನೆಗಳನ್ನು ಪ್ರತಿಪಾದಿಸಿದೆ. ಸಂವಿಧಾನದ ಮೌಲ್ಯಗಳನ್ನು ಉಳಿಸುವ ಮತ್ತು ಸಂರಕ್ಷಿಸುವ ಜವಾಬ್ದಾರಿಯನ್ನು ಪ್ರಕಟಿಸಿದೆ. ಬಿಜೆಪಿಯ ಆಲೋಚನೆಗಳು ದೇಶದ ಸಮಗ್ರತೆಗೆ ಹಿತಕಾರಿಯಾಗಿಲ್ಲ. ಸಮನ್ವಯ ಮತ್ತು ಸಹಕಾರದ ಉನ್ನತ ಆದರ್ಶಗಳನ್ನು ಬಿಜೆಪಿ ನಿರ್ಲಕ್ಷಿಸಿದ್ದು, ಸಾಮಾಜಿಕ ಸಮಾನತೆ ಮತ್ತು ನ್ಯಾಯವನ್ನು ಒದಗಿಸಲು ವಿಫಲವಾಗಿದೆ ಎಂದು ಆರೋಪಿಸಿದರು.ದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿ ರಾಜ್ಯದಲ್ಲಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿದರು.
ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ತಾಪಂ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಮುಖಂಡರಾದ ಚುಂಚೇಗೌಡ, ಅಪ್ಪಿ ವೆಂಕಟೇಶ್, ಬಿ.ಜಿ.ಹೇಮಂತರಾಜು, ರೇವತಿ ಸೇರಿ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.