ಕನ್ನಡಪ್ರಭ ವಾರ್ತೆ, ಬೆಂಗಳೂರು
ಕಾಂಗ್ರೆಸ್‌ನ ಐದು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಚುನಾವಣಾ ರಣತಂತ್ರ ರೂಪಿಸಲಿದ್ದು, ಚುನಾವಣೆ ದಿನಾಂಕವಾದ ಜೂ.18ರವರೆಗೆ ಶಾಸಕರು ರೆಸಾರ್ಟ್‌ನಲ್ಲೇ ಉಳಿಯಲಿದ್ದಾರೆ. ಶಾಸಕರು ನೇರವಾಗಿ ರೆಸಾರ್ಟ್‌ನಿಂದ ಬಂದು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.
ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಆದ ಬಳಿಕ ನಡೆಯುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆಯಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಮತಗಳ ಕೊರತೆಯಿದೆ. ಆದರೂ 5ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್ ಅವರನ್ನು ಕಣಕ್ಕಿಳಿಸಿದೆ. ಶತಾಯಗತಾಯ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಲು ರೆಸಾರ್ಟ್‌ನಲ್ಲಿ ರಣತಂತ್ರ ಹೆಣೆಯಲಿದ್ದಾರೆ.
ಪ್ರಸ್ತುತ ಕಾಂಗ್ರೆಸ್ ಬಳಿ ವಿಧಾನಸಭೆ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮತ ಸೇರಿದಂತೆ 135 ಮತಗಳು ಇವೆ. ಜತೆಗೆ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ್, ಕೆ.ಎಚ್. ಪುಟ್ಟಸ್ವಾಮಿಗೌಡ ಅವರ ಬೆಂಬಲ ಸೇರಿ 138 ಮತಗಳು ಇವೆ.
ಆದರೆ, ಪರಿಷತ್‌ಗೆ ಗೌಪ್ಯ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮೊದಲ ನಾಲ್ಕು ಅಭ್ಯರ್ಥಿಗಳಿಗೆ ಪ್ರತಿ ಅಭ್ಯರ್ಥಿಗೆ 28 ಮತಗಳ ಜತೆಗೆ ಹೆಚ್ಚುವರಿಯಾಗಿ ಒಂದು ಮತ ಹಾಕಿಸಲಾಗುತ್ತದೆ. ಉಳಿದ ಮತಗಳ ಜತೆಗೆ ಎರಡನೇ ಪ್ರಾಶಸ್ತ್ಯ ಮತಗಳನ್ನು 5ನೇ ಅಭ್ಯರ್ಥಿಗೆ ಚಲಾವಣೆ ಮಾಡಿ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಉದ್ದೇಶದಲ್ಲಿ ಕಾಂಗ್ರೆಸ್ ಇದೆ.ಯಾರ ಮತ ಯಾರಿಗೆ? ರೆಸಾರ್ಟ್‌ನಲ್ಲಿ ನಿರ್ದೇಶನ: