ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಂಗಳವಾರ ನಗರ ಹೊರವಲಯದ ಕಂಠಿ ರೆಸಾರ್ಟ್ ನಲ್ಲಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಎರಡು ಲೋಕಸಭಾ ಚುನಾವಣೆಗಳಲ್ಲಿ ವೀಣಾ ಕಾಶಪ್ಪನವರ, ಸಂಯುಕ್ತ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರಿಗೆ ಟಿಕೆಟ್ ಕೊಡಿಸುವಲ್ಲಿ ನಾನೂ ಕಾರಣ ಎಂದರು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿದಲ್ಲದೆ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಲು ಕ್ರಮ ಕೈಗೊಂಡಿದ್ದೇನೆ. ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ಆದೇಶಿಸಿದ್ದು ಸಹ ನಾನೇ, ಬಿಜೆಪಿ ಅವರಿಂದ ಇದು ಯಾಕೆ ಸಾಧ್ಯವಾಗಲಿಲ್ಲ ಎಂಬುದನ್ನು ಸಮಾಜ ಅರ್ಥ ಮಾಡಿಒಳ್ಳಬೇಕೆಂದು ಹೇಳಿದರು.ಸಮುದಾಯದ ಎಲ್ಲ ವಿಷಯಗಳಿಗೆ ಸ್ಪಂದಿಸಲು ನಾವು ಸಿದ್ಧರಿದ್ದೇವೆ. ಉಪಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕು, ಉಮೇಶ ಮೇಟಿ ಗೆಲುವಿಗೆ ಕಾರಣರಾಗಬೇಕೆಂದು ಮನವಿ ಮಾಡಿಕೊಂಡರು.
ಸಮಾಜದ ಪರವಾಗಿಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ಸಮಾಜದ ಎಲ್ಲ ಬಂಧುಗಳು ಪಕ್ಷದ ಬೆಂಬಲಕ್ಕೆ ನಿಂತಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಎಲ್ಲ ಭರವಸೆ ಈಡೇರಿಸಲಿದೆ ಎಂಬ ವಿಶ್ವಾಸವಿದೆ .ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸೋಣ ಎಂದರು.
ಸಚಿವರಾದ ಭೈರತಿ ಸುರೇಶ, ಆರ್.ಬಿ. ತಿಮ್ಮಾಪೂರ, ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಸಚಿವ ಎಸ್.ಆರ್. ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಿದ್ದು ಕೊಣ್ಣೂರ, ನಗರಸಭೆ ಮಾಜಿ ಸದಸ್ಯ ಚೆನ್ನವೀರ ಅಂಗಡಿ ಮತ್ತಿತರರು ಇದ್ದರು.