ರಾಮನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮತ್ತು ವೋಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿರುವ ಕಮ್ಯೂನಿಸ್ಟ್ ಪಕ್ಷಗಳು ಮತ್ತು ರಾಷ್ಟ್ರ ವಿರೋಧಿ ಸಂಘಟನೆಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದ್ದು, ಇದಕ್ಕೆ ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ತಿಳಿಸಿದರು.
ನಿಧನರಾದವರ ಹೆಸರು ಕೈಬಿಡುವುದು, ಸ್ಥಳಾಂತರವಾದವರ ಬದಲಾವಣೆ ಎಸ್‌ಐಆರ್ ಸಹಜ ಪ್ರಕ್ರಿಯೆ. ಇದನ್ನು ಯಾವುದೇ ಸರ್ಕಾರಿ ಅಧಿಕಾರಿಗಳು ಮಾಡುವುದಿಲ್ಲ. ಪ್ರತಿ ಮತಗಟ್ಟೆಗೆ ನಿಯೋಜಸಿರುವ ನೋಂದಾಯಿತ ರಾಜಕೀಯ ಪಕ್ಷಗಳ ಬಿಎಲ್‌ಒ -2 ಜೊತೆಗೆ ಓರ್ವ ಕಂದಾಯ ಅಧಿಕಾರಿ ಸಮ್ಮುಖದಲ್ಲಿ ಪಾರದರ್ಶಕವಾಗಿ ಈ ಪ್ರಕ್ರಿಯೆ ನಡೆಯುತ್ತದೆ. ಹೀಗಿರುವಾಗ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಈಗಾಗಲೇ ಪಶ್ಚಿಮ ಬಂಗಾಳ, ಬಿಹಾರ, ಕೇರಳ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹೇಗೆ ಭಾಗವಹಿಸಬೇಕೆಂದು ಪವರ್ ಪಾಯಿಂಟ್ ಪ್ರಸೆಂಟೇಷನ್ ಮೂಲಕ ಆ ಪಕ್ಷದ ನಾಯಕರಿಗೆ ವಿವರಿಸಿದ್ದರು. ಕಾಂಗ್ರೆಸ್ ಆಡಳಿತವಿರುವ ಕೇರಳದ ಮುಖ್ಯಮಂತ್ರಿಗಳೇ ಎಸ್‌ಐಆರ್ ಒಪ್ಪಿಕೊಂಡಿದ್ದಾರೆ. ರಾಹುಲ್‌ಗಾಂಧಿ ಅವರ ಕಾರಣಕ್ಕಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದರು.ಈಗ ಎಸ್‌ಐಆರ್ ಮೂಲಕ ದೇಶದಲ್ಲಿ 12 ಕೋಟಿ ಮತ್ತು ಕರ್ನಾಟಕದಲ್ಲಿ 57 ಲಕ್ಷ ಮತದಾರರನ್ನು ಕೈಬಿಟ್ಟಿದ್ದಾರೆ. ದೇಶದಲ್ಲಿ ರಾಜಕಾರಣ ಬದಲಾವಣೆ ಮಾಡಲು ಹೋರಾಟದ ನೇತೃತ್ವ ವಹಿಸಿದವರು ರೆಜಿಮ್ ಚೇಂಜ್ ಮಾತುಗಳನ್ನು ಆಡುತ್ತಿದ್ದಾರೆ. ಇದಕ್ಕಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಅಪಪ್ರಚಾರ ಮಾಡಿ ಅರಾಜಕತೆ ಸೃಷ್ಟಿಸಲು ಹೊರಟಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಪಕ್ಷದಲ್ಲಿ ರೆಜಿಮ್ ಚೇಂಜ್ ಆಗಬೇಕು :
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ,ರಾಮನಗರ ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಗಡಿ ಮಂಡಲ ಅಧ್ಯಕ್ಷ ಪ್ರಸಾದ್ ಗೌಡ, ಪರಿಷತ್ ಸದಸ್ಯ ಆರ್.ವಿ.ಸುರೇಶ್, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಕಾಳಯ್ಯ, ನಗರ ಘಟಕ ಅಧ್ಯಕ್ಷ ಚಂದನ್ ಮೋರೆ, ಮುಖಂಡರಾದ ಜಿ.ವಿ. ಪದ್ಮನಾಭ್ , ರುದ್ರದೇವರು, ಸಿದ್ದು, ಜೆಡಿಎಸ್ ಮುಖಂಡರಾದ ಜಯಕುಮಾರ್, ಚನ್ನಪ್ಪ, ಕೆಂಪರಾಜು, ಚಂದ್ರಶೇಖರ್, ಚೇತನ್, ಶಿವಮುತ್ತು ರಾಮಕೃಷ್ಣಯ್ಯ, ಲೋಕೇಶ್, ಮಹಾದೇವ್ ಇತರರಿದ್ದರು.
ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಇಲ್ಲ. ಆಗ ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿರಲಿಲ್ಲ. ಎಸ್‌ಐಆರ್ ಗಿಂತ ಮೊದಲೂ ಕಾಂಗ್ರೆಸ್ ಸೋಲುತ್ತಲೇ ಬಂದಿದೆ. ಕಾಂಗ್ರೆಸ್ ನಾಯಕತ್ವದ ವೈಫಲ್ಯ ಚುನಾವಣಾ ಆಯೋಗದ ಮೇಲೆ ಹೊರಿಸಲಾಗುತ್ತಿದೆ.
ಕೋಟ್ ...........
- ಡಾ.ಸಿ.ಎನ್.ಮಂಜುನಾಥ್, ಸಂಸದರು
ರಾಮನಗರದಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.