ರೋಲ್ ಕಾಲ್ ಗುರೂಜಿಗಳಿಂದ ಕಾಂಗ್ರೆಸ್ ಭವಿಷ್ಯ ನಿರ್ಧಾರವಾಗಲ್ಲ: ಕೆ.ಎಂ.ಉದಯ್

KannadaprabhaNewsNetwork |  
Published : Oct 12, 2025, 01:00 AM IST
11ಕೆಎಂಎನ್ ಡಿ28 | Kannada Prabha

ಸಾರಾಂಶ

ರೋಲ್ ಕಾಲ್ ಮಾಡುವ ಗುರೂಜಿಗಳಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗುವುದಿಲ್ಲ. ನಾಡಿನ ಜನರೇ ಅದನ್ನು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ, ಸಿದ್ಧಾಂತ ಹೊಂದಿದೆ. ಅದನ್ನು ನೋಡಿ ಜನರು ಆಶೀರ್ವಾದ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ರೋಲ್ ಕಾಲ್ ಮಾಡುವ ಗುರೂಜಿಗಳಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗುವುದಿಲ್ಲ. ನಾಡಿನ ಜನರೇ ಅದನ್ನು ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಬ್ರಹ್ಮಾಂಡ ಗುರೂಜಿ ಅವರಿಗೆ ತಿರುಗೇಟು ನೀಡಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಚಾಮನಹಳ್ಳಿ, ರಾಂಪುರ, ಸೊಳ್ಳೆಪುರ, ವಳಗೆರೆಹಳ್ಳಿ ಹಾಗೂ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಿಂದ ವಳೆಗೆರೆ ಹಳ್ಳಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ, ಸಿದ್ಧಾಂತ ಹೊಂದಿದೆ. ಅದನ್ನು ನೋಡಿ ಜನರು ಆಶೀರ್ವಾದ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ವಿಧಾನಸಭಾ ಚುನಾವಣೆಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ರಾಜ್ಯದ ಮತದಾರರು ನಿರ್ಧರಿಸುತ್ತಾರೆ. ಆದರೆ, ಕೇವಲ ಬ್ರಹ್ಮಾಂಡ ಗುರೂಜಿ ಹೇಳಿದರೆಂಬ ಒಂದು ಮಾತಿನಿಂದ ಯಾವ ಪಕ್ಷವು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.

ಬ್ರಹ್ಮಾಂಡ ಗುರೂಜಿ ಹಿನ್ನೆಲೆ ಏನು ಎನ್ನುವುದು ನನಗೆ ಗೊತ್ತಿದೆ. ಕೇವಲ ಟಿವಿ ಮುಂದೆ ಕುಳಿತುಕೊಂಡು ಬುರುಡೆ ಜ್ಯೋತಿಷ್ಯ ಹೇಳಿ ಮಂಕು ಬೂದಿ ಎರಚಿ ಜನರನ್ನು ಯಾಮಾರಿಸಿ ರೋಲ್ ಕಾಲ್ ಮೂಲಕ ಬದುಕು ನಡೆಸುತ್ತಿರುವ ಈತನಿಗೆ ಕಾಂಗ್ರೆಸ್ ಭವಿಷ್ಯ ಹೇಳುವ ನೈತಿಕ ಹಕ್ಕಿಲ್ಲ ಎಂದು ನೇರವಾಗಿ ಜಾಡಿಸಿದರು.

ನೀರು ಬಳಕೆದಾರರ ಸಂಘಕ್ಕೆ ದೇವೇಗೌಡ ಅಧ್ಯಕ್ಷರಾಗಿ ಆಯ್ಕೆ

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕೋಡಾಲ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣಪುರ ಎನ್.ಡಿ. ದೇವೇಗೌಡ (ಸುಂದ್ರಣ್ಣ) ಹಾಗೂ ಉಪಾಧ್ಯಕ್ಷರಾಗಿ ಕೋಡಾಲ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಎನ್.ಡಿ.ದೇವೇಗೌಡ (ಸಂದ್ರಣ್ಣ) ಮಾತನಾಡಿ, ಸಂಘಕ್ಕೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಸಂಘದ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸಂಘದ ವ್ಯಾಪ್ತಿಯಲ್ಲಿ ಬರುವ ಕೃಷಿ ಚಟುವಟಿಕೆಗೆ ನೀರಾವರಿ ಅನುಕೂಲಕ್ಕೆ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಹರಿಸಿ ಅನುದಾನ ತಂದು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಎಂದರು.

ನೂತನ ಅಧ್ಯಕ್ಷ ಎನ್.ಡಿ.ದೇವೇಗೌಡ (ಸುಂದ್ರಣ್ಣ) ಹಾಗೂ ಉಪಾಧ್ಯಕ್ಷರಾಗಿ ಕೋಡಾಲ ಕೃಷ್ಣೇಗೌಡ ಅವರನ್ನು ಎಲ್ಲಾ ಮುಖಂಡರು ಅಭಿನಂದಿಸಿದರು. ಈ ವೇಳೆ ನಿರ್ದೇಶಕರಾದ ಕೆ.ಯೋಗರಾಜ್, ನರಸೇಗೌಡ, ದೇವರಾಜ್, ಜೋಗೀಗೌಡ, ವೆಂಕಟರಾಮೇಗೌಡ, ಎಂ.ಕೆ.ಪ್ರಕಾಶ್, ಪುಟ್ಟಲಕ್ಷ್ಮಮ್ಮ, ಶಂಕರೇಗೌಡ, ಕರಿಶೆಟ್ಟಿ, ಕಾರ್ಯದರ್ಶಿ ನರಸಿಂಹೇಗೌಡ, ಚುನಾವಣಾಧಿಕಾರಿ ಅನಿಲ್‌ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ