ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ: ಸ್ಟಾರ್ ಚಂದ್ರು

KannadaprabhaNewsNetwork |  
Published : Apr 19, 2024, 01:04 AM IST
18ಕೆಎಂಎನ್ ಡಿ24 | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ ಜೋರಾಗಿದೆ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿವೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬಡವರಿಗೆ ಬದುಕು ಕಟ್ಟಿಕೊಟ್ಟ ಪಕ್ಷ ಕಾಂಗ್ರೆಸ್. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬಿದ ಗ್ಯಾರಂಟಿ ಯೋಜನೆಗಳಿಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕೇಂದ್ರದಲ್ಲೂ ‘ಗ್ಯಾರಂಟಿ’ ಸರ್ಕಾರ ರಚನೆಯಾಗಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ 2ನೇ ವೃತ್ತದ ವಿವಿಧ ಗ್ರಾಪಂಗಳಲ್ಲಿ ಶಾಸಕ ರಮೇಶ್ ಬಾಬು, ಬಂಡಿಸಿದ್ದೇಗೌಡ ಅವರೊಂದಿಗೆ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡಬೇಕು. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಈಗಾಗಲೇ ರಾಜ್ಯದ ಜನತೆ ಮನೆಬಾಗಿಲಿಗೆ ಗೃಹಲಕ್ಷ್ಮೀ ಕಾಲಿಟ್ಟಿದ್ದು ಮುಂದೆ ಮಹಾಲಕ್ಷ್ಮೀ ಕೂಡ ಬರಲಿದ್ದಾಳೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ ಜೋರಾಗಿದೆ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿವೆ ಎಂದು ಹೇಳಿದರು.

ಕೃಷಿಕರ ನಂತರ ಕಾರ್ಮಿಕ ವರ್ಗ ದೇಶದ ಅರ್ಥವ್ಯವಸ್ಥೆಗೆ ಅಡಿಪಾಯ. ಶ್ರಮಿಕ ವರ್ಗದ ಹಕ್ಕುಗಳನ್ನು ಮರಳಿಸಿ ಅವರ ಭವಿಷ್ಯ ರೂಪಿಸಬೇಕಿದೆ. ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವದ ಉಳುವಿಗಾಗಿ ಈ ಜಿಲ್ಲೆಯ ಸ್ವಾಭಿಮಾನದ ಅಸ್ತಿತ್ವಕ್ಕಾಗಿ ಮತದಾರರು ಕಾಂಗ್ರೆಸ್ ಬೆಂಬಲಿಸುವ ಮೂಲಕ ಜನಶಕ್ತಿ ನೀಡಬೇಕೆಂದು ಮನವಿ ಮಾಡಿದರು.

ಹೋದ ಕಡೆಯಲೆಲ್ಲ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಸಿಲಿನಲ್ಲೂ ಜನರು ನನ್ನನ್ನು ನೋಡಲು ಸೇರುತ್ತಿದ್ದಾರೆ. ಮಹಿಳೆಯರು, ವೃದ್ಧರು, ಯುವಕರು ಕಾಂಗ್ರೆಸ್ ನತ್ತ ಒಲವು ವ್ಯಕ್ತಪಡಿಸುತ್ತಿದ್ದಾರೆ. ನೂರಕ್ಕೆ ನೂರು ಗೆಲುವು ನಿಮ್ಮದೇ ಎಂದು ಹೇಳುತ್ತಿರುವುದನ್ನು ಕೇಳಿದರೆ ನನ್ನ ಗೆಲುವಿನ ಆತ್ಮವಿಶ್ವಾಸ ಡಬಲ್ ಆಗಿದೆ ಎಂದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆ, ನರೇಗಾದ ಕೂಲಿ‌ 400 ರು. ಗೆ ಹೆಚ್ಚಳ ಮಾಡುವುದು ಸೇರಿ ಹಲವು ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಮನವಿ ಮಾಡಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ