ಇಂದಿನಿಂದ ಕಾಂಗ್ರೆಸ್ ಸರಣಿ ಸಭೆ: ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ

KannadaprabhaNewsNetwork |  
Published : Jun 14, 2024, 01:05 AM ISTUpdated : Jun 14, 2024, 08:28 AM IST
ಕಾಂಗ್ರೆಸ್‌ | Kannada Prabha

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

 ಬೆಂಗಳೂರು :  ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

ಶುಕ್ರವಾರ ಬೆಳಗ್ಗೆ ಮೊದಲನೆಯದಾಗಿ ಚಿಂತಕರ ಛಾವಡಿ ರಚನೆ ಸಂಬಂಧ ಸಭೆ ನಡೆಯಲಿದೆ. ಪಕ್ಷ ಹಾಗೂ ಸರ್ಕಾರಕ್ಕೆ ಅಗತ್ಯ ಸಂದರ್ಭಗಳಲ್ಲಿ ಸಲಹೆ-ಮಾರ್ಗದರ್ಶನ ನೀಡಲು ಬುದ್ಧಿ ಜೀವಿಗಳನ್ನು ಒಳಗೊಂಡ ಚಿಂತಕರ ಛಾವಡಿ ರಚಿಸಲಿದ್ದು, ಚಿಂತಕರ ಛಾವಡಿಯಲ್ಲಿ ಯಾರು ಇರಬೇಕು? ಅವರ ಕೆಲಸ ಕಾರ್ಯಗಳೇನು ಎಂಬುದು ಸೇರಿದಂತೆ ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚೆಯಾಗಲಿದೆ.

ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಯಲಿದ್ದು, ಪರಾಜಿತ ಅಭ್ಯರ್ಥಿಗಳು ಈಗಿನಿಂದಲೇ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಬಲಗೊಳಿಸುವ ಕಾರ್ಯದಲ್ಲಿ ತೊಡಗುವಂತೆ ಮಾಡಲು ಸಲಹೆ-ಮಾರ್ಗದರ್ಶನ ನೀಡುವ ಸಾಧ್ಯತೆಯಿದೆ.ಜತೆಗೆ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್‌ ಅವರು ಶುಕ್ರವಾರದಿಂದ ಪ್ರತ್ಯೇಕವಾಗಿ ನಾಯಕರು, ಮುಂಚೂಣಿ ಘಟಕಗಳ ಮುಖ್ಯಸ್ಥರು ವಿವಿಧ ಹಂತದ ಪದಾಧಿಕಾರಿಗಳ ಜತೆ ಚುನಾವಣೆ ಫಲಿತಾಂಶ, ಮುಂಬರುವ ವಿಧಾನಸಭೆ ಉಪ ಚುನಾವಣೆ, ಕಾಂಗ್ರೆಸ್‌ ಕುಟುಂಬ ಕಾರ್ಯಕ್ರಮ ಕುರಿತು ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಈ ಸಭೆಯಲ್ಲಿ ಮಂಚೂಣಿ ಘಟಕಗಳ ಅಧ್ಯಕ್ಷರ ಸಾಧನೆ ಪರಾಮರ್ಶೆ ನಡೆಯಲಿದೆ. ಅಧಿಕಾರವಹಿಸಿಕೊಂಡ ನಂತರದಿಂದ ಇದುವರೆಗೂ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಅಧ್ಯಕ್ಷರು ವರದಿ ನೀಡಲಿದ್ದು, ಅದರ ಆಧಾರದ ಮೇಲೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ಟಿಕೆಟ್‌ ಘೋಷಣೆ ಮುನ್ನವೇ ಕೈ ನಾಮಪತ್ರ