- ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪ । ಅರಬಗಟ್ಟೆಯಲ್ಲಿ ಜಾಗೃತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಕೇಂದ್ರ ಸರ್ಕಾರ ಹೊಸ ಕಾಯ್ದೆ ಮಾಡಿರುವ ವಿಬಿ- ಜಿ ರಾಮ್ ಜಿ ಯೋಜನೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಭಾನುವಾರ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ಯುಪಿಯ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯಲ್ಲಿ ಬಾರಿ ಭ್ರಷ್ಟಾಚಾರ ನಡೆಯುತ್ತಿತ್ತು. ಜಾಬ್ ಕಾರ್ಡ್ ವ್ಯವಸ್ಥೆಗಳಲ್ಲಿ ನಕಲಿ ಹೆಸರುಗಳೂ ಇದ್ದವು. ರಾಜಕಾರಣಿಗಳ ಹೆಸರೂ ಬಯಲಾಗಿರುವುದು ಮಾಧ್ಯಮಗಳಲ್ಲೇ ಬಂದಿದೆ. ಅದನ್ನು ತಡೆಯುವ ಉದ್ದೇಶದಿಂದ ವಿಬಿ- ಜಿ ರಾಮ್ ಜಿ ಹೆಸರಿನ ಹೊಸ ಕಾಯ್ದೆ ಕೇಂದ್ರ ಸರ್ಕಾರ ಜಾರಿಗೆ ತಂದು ಕಾರ್ಮಿಕರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದರು.
ಇಂದಿರಾ ಗಾಂಧಿ ಪತಿ ಫಿರೋಜ್ ಗಾಂಧಿ, ಕಾಂಗ್ರೆಸ್ ಮುಖಂಡರು ಮಹಾತ್ಮ ಗಾಂಧಿ ಅವರ ಹೆಸರನ್ನು ನಕಲು ಮಾಡಿಕೊಂಡು ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಎಂದು ಹೆಸರಿಟ್ಟುಕೊಂಡಿದ್ದಾರೆ. ಈಗ ವಿಬಿ- ರಾಮ್ ಜಿ ಹೆಸರು ಇಟ್ಟಿರುವುದಕ್ಕೆ ಟೀಕಿಸುವ ಕಾಂಗ್ರೆಸ್ ಇಂದಿರಾ ಕ್ಯಾಂಟಿನ್ ಬದಲು ಗಾಂಧಿ ಕ್ಯಾಂಟೀನ್ ಅಂತ ಹೆಸರಿಡಬಹುದಿತ್ತಲ್ಲವೇ? ರಾಜೀವ್‌ಗಾಂಧಿ ಹೌಸಿಂಗ್ ಬೋರ್ಡ್ ಬದಲು ಗಾಂಧೀಜಿ ಹೌಸಿಂಗ್ ಬೋರ್ಡ್ ಅಂತ ಹೆಸರು ಇಡಬಹುದಿತ್ತಿಲ್ಲವೇ ಎಂದು ಪ್ರಶ್ನಿಸಿದರು.
17ರಂದು ಪಾದಯಾತ್ರೆ:
ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ಕರಿಬಸಪ್ಪ ಇತರರು ಇದ್ದರು.
-8ಎಚ್.ಎಲ್.ಐ1.ಜೆಪಿಜಿ: