ಕಡ್ಡಾಯ... 5 ರಂದು ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ:

KannadaprabhaNewsNetwork |  
Published : Oct 02, 2024, 01:01 AM IST
1-ಮಾನ್ವಿ-3 | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ ಭಾಗಿ । ಹಲವು ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ ಮಾನ್ವಿ

ಪಟ್ಟಣದ ರಾಯಚೂರು ರಸ್ತೆಯಲ್ಲಿನ ಬಯಲು ಜಾಗದಲ್ಲಿ ಅ.5 ರಂದು ಕಾಂಗ್ರೆಸ್‌ ಪಕ್ಷದಿಂದ ಬೃಹತ್ ಸ್ವಾಭಿಮಾನ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ ಎಂದು ಶಾಸಕ ಹಂಪಯ್ಯ ನಾಯಕ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ವಿವಿಧ ಇಲಾಖೆಯ ಸಚಿವರು, ಶಾಸಕರು, ಎಂಎಲ್‌ಸಿಗಳು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯನವರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಕಲ್ಮಲಾದಿಂದ ಸಿಂಧನೂರು ವರೆಗಿನ ₹1600 ಕೋಟಿ ವೆಚ್ಚದ ಚತುಷ್ಪದ ರಸ್ತೆ, ಚೀಕಲಪರ್ವಿ ತುಂಗಭದ್ರ ನದಿಗೆ ಬ್ರೀಜ್ ಕಂ ಬ್ಯಾರೆಜ್, ಚಿಕ್ಕಮಂಚಾಲಿ ಯೋಜನೆ, ಮಿನಿ ವಿಧಾನಸೌಧ, ಮಾನ್ವಿ ಮತ್ತು ಸಿರವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಮಾತನಾಡಿ, ಸಿಎಂ ಸಿದ್ದರಾಮಯ್ಯನವರನ್ನು ವಿರೋಧ ಪಕ್ಷಗಳು ಸಂಕಷ್ಟಕ್ಕೆ ಒಳಪಡಿಸುತ್ತಿದ್ದು ನಾವೇಲ್ಲರು ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಲ್ಲಬೇಕಾಗಿರುವುದರಿಂದ ಪಟ್ಟಣದಲ್ಲಿ ನಡೆಯುವ ಸ್ವಾಭಿಮಾನ ಬೃಹತ್ ಸಮಾವೇಶ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ದುಲ್ ಗಾಫೂರ್ ಸಾಬ್, ರಾಜಾ ಸುಭಾಷ ನಾಯಕ,ಕೆ.ಬಸವಂತಪ್ಪ, ಸಲಿಂಪಾಷಾ, ಪುರಸಭೆಯ ಸದಸ್ಯರು ಹಾಗೂ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ