ಕನ್ನಡಪ್ರಭ ವಾರ್ತೆ ಉಡುಪಿ
ಅವರು ಸೋಮವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಚಳವಳಿ ಯಶಸ್ವಿಗೊಳಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ವೋಟ್ ಬಚಾವೋ ದೇಶ ಬಚಾವೋ ಪ್ರತಿಭಟನೆಗೆ ಪ್ರತಿಜಿಲ್ಲೆಯಿಂದ ಕನಿಷ್ಠ 100 ಕಾರ್ಯಕರ್ತರು ಭಾಗವಹಿಸಬೇಕು ಎಂದರು.ಈ ಪ್ರತಿಭಟನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ್ ಕುಮಾರ್ ಅವರ ರಾಜೀನಾಮೆ. ಎಸ್‌ಐಆರ್ ಮತದಾರರ ಪಟ್ಟಿಯಲ್ಲಿ ತೆಗೆದು ಹಾಕಲಾಗಿರುವ 13.3ದ ಕೋಟಿ ಹೆಸರುಗಳ ಮರುಸ್ಥಾಪನೆ ಮತ್ತು ಗಂಭೀರ ವ್ಯತ್ಯಾಸಗಳ ಬಗ್ಗೆ ತನಿಖೆಗೆ ಆಗ್ರಹಿಸಲಾಗುತ್ತದೆ ಎಂದರು.ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ನೇರ ಹಣಾಹಣಿ ಇರುವ ಕ್ಷೇತ್ರಗಳಲ್ಲಿ ಮತಗಳನ್ನು ಕಸಿಯಲು ಪಿತೂರಿ ನಡೆಯುತ್ತಿದೆ. ನ 5 ರಂದು ಕೆಪಿಸಿಸಿ ವತಿಯಿಂದ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿಯೂ ವೋಟ್ ಬಜಾವ್ ದೇಶ್ ಬಚಾವೋ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ. ಅದೇ ಮಾದರಿಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಮ್.ಎ.ಗಫೂರ್, ಕರ್ನಾಟಕ ಸರ್ಕಾರ ಬೀಜ ಮತ್ತು ಸಾವಯವ ಪ್ರಮಾಣ ನಿಗಮದ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಪಕ್ಷದ ಪ್ರಮುಖರಾದ ದಿನಕರ ಹೇರೂರು, ರಾಜು ಪೂಜಾರಿ, ದಿನೇಶ್ ಮೊಳಹಳ್ಳಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಶುಭದ ರಾವ್, ದಿನೇಶ್ ಪುತ್ರನ್, ಬಿ . ನರಸಿಂಹಮೂರ್ತಿ, ಪ್ರಖ್ಯಾತ್ ಶೆಟ್ಟಿ, ಹರಿಪ್ರಸಾದ್ ರೈ, ಮಹಾಬಲ ಕುಂದರ್, ಗಣೇಶ್ ನೆರ್ಗಿ ಮತ್ತಿತರರು ಇದ್ದರು. ˌ
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಕಿಣಿ ಸ್ವಾಗತಿಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿ, ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ನಿರ್ವಹಿಸಿದರು.