ಜನವರಿ 31ರೊಳಗೆ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ‘ಮನರೇಗ ಬಚಾವ್‌ ಸಂಗ್ರಾಮ್‌’

KannadaprabhaNewsNetwork |  
Published : Jan 20, 2026, 03:00 AM IST
ಮನರೇಗಾ ಬಚಾವ್‌ ಸಂಗ್ರಾಮ್‌ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಬದಲಿಸಿರುವುದನ್ನು ಖಂಡಿಸಿ ಮತ್ತು ಕಾಯ್ದೆ ಮರುಜಾರಿಗೆ ಆಗ್ರಹಿಸಿ ಎಐಸಿಸಿ, ಕೆಪಿಸಿಸಿ ನಿರ್ದೇಶನದ ಮೇರೆಗೆ ‘ಮನರೇಗ ಬಚಾವ್ ಸಂಗ್ರಾಮ್’ ಆಂದೋಲನವನ್ನು ದ.ಕ. ಜಿಲ್ಲೆಯಾದ್ಯಂತ ನಡೆಸಲು ದ.ಕ. ಕಾಂಗ್ರೆಸ್ ನಿರ್ಧರಿಸಿದೆ.

ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯ ‘ಬಚಾವ್ ಸಂಗ್ರಾಮ್’ ಪೂರ್ವಭಾವಿ ಸಭೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಜ.31ರೊಳಗೆ ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ‘ಮನರೇಗಾ ಬಚಾವ್‌ ಸಂಗ್ರಾಮ್’ ಪಾದಯಾತ್ರೆ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್‌ ಕುಮಾರ್‌, ಗ್ರಾಮೀಣ ಭಾಗದ ಬಡ ಕಾರ್ಮಿಕರು ಹಾಗೂ ಪಂಚಾಯಿತಿಗಳ ಅಭಿವೃದ್ಧಿಗೆ ಪೂರಕವಾಗಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಬದಲಿಸಿರುವುದನ್ನು ಖಂಡಿಸಿ ಮತ್ತು ಕಾಯ್ದೆ ಮರುಜಾರಿಗೆ ಆಗ್ರಹಿಸಿ ಎಐಸಿಸಿ, ಕೆಪಿಸಿಸಿ ನಿರ್ದೇಶನದ ಮೇರೆಗೆ ‘ಮನರೇಗ ಬಚಾವ್ ಸಂಗ್ರಾಮ್’ ಆಂದೋಲನವನ್ನು ದ.ಕ. ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ತಿಳಿಸಿದರು.ವಿಬಿ ಜಿ ರಾಮ್ ಜಿ ಯೋಜನೆ ಎಂದು ಹೆಸರು ಬದಲಿಸಿದ್ದು ಮಾತ್ರವಲ್ಲ, ಜನರ ಜೀವನೋಪಾಯ ಹಾಗೂ ಪಂಚಾಯಿತಿಗಳ ಅಧಿಕಾರವನ್ನೂ ಕೇಂದ್ರ ಸರ್ಕಾರ ಕಸಿದುಕೊಂಡಿದೆ. ಇದು ದೇಶದ ಗ್ರಾಮೀಣ ಕಾರ್ಮಿಕರ ಪಾಲಿನ ಮರಣ ಶಾಸನ ಎಂದು ಹೇಳಿದರು.

ನಿರ್ಣಯ: ಜ.31ರೊಳಗೆ ಪ್ರತಿ ವಿಧಾನಸಭಾ ವ್ಯಾಪ್ತಿಯಲ್ಲಿ ‘ಮನರೇಗಾ ಬಚಾವ್‌ ಸಂಗ್ರಾಮ್’ ಪಾದಯಾತ್ರೆ ಆಯೋಜಿಸುವುದು, ಜ.21ರಂದು ಕುದ್ಮುಲ್ ರಂಗರಾವ್ ಪುರಭವನದ ಬಳಿ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ, ಫೆ.9, 10, 11ರಂದು ಸುಳ್ಯದಿಂದ ಮೂಲ್ಕಿವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸುವುದು, ಇತ್ತೀಚಿಗೆ ಕೆಪಿಸಿಸಿ ಸಭೆಯಲ್ಲಿ ನಡೆದ ಎಲ್ಲ ಕಾರ್ಯಕ್ರಮ ಮತ್ತು ಸೂಚನೆಗಳನ್ನು ಸುಸೂತ್ರವಾಗಿ ಅನುಷ್ಠಾನ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಸುಳ್ಯ ವಿಧಾನಸಭಾ ಅಭ್ಯರ್ಥಿ ಜಿ.ಕೃಷ್ಣಪ್ಪ, ಮೂಡ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷರು, ನಗರ ಯೋಜನ ಪ್ರಾಧಿಕಾರ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಬ್ಲಾಕ್ ಉಸ್ತುವಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ