
ಕನ್ನಡಪ್ರಭ ವಾರ್ತೆ, ತುಮಕೂರು
ಮಹಿಳೆಯರಿಗೆ ರಾಜಕೀಯ ಅಧಿಕಾರ ನೀಡದೆ, ಕೇವಲ ವೋಟ್ ಬ್ಯಾಂಕ್ ರೀತಿಯ ಭಾವನೆ ಹೊಂದಿರುವ ಕಾಂಗ್ರೆಸ್ ನಾಯಕರ ನಿಜ ಬಣ್ಣ ಬಯಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಅಧಿಕಾರ ನೀಡುವುದು ಕಾಂಗ್ರೆಸ್ ನಾಯಕರಿಗೆ ಇಷ್ಟವಿಲ್ಲ. ಕಾಂಗ್ರೆಸ್ ಪಕ್ಷದ ಮಹಿಳೆಯರೇ ತಮ್ಮ ಪಕ್ಷದ ನಾಯಕರ ವಿರುದ್ಧ ಸಿಡಿದೇಳುವ ಕಾಲ ಬರುತ್ತದೆ ಎಂದರು. ಕೇವಲ 2 ಸಾವಿರ ರೂ. ಕೊಟ್ಟು ಮಹಿಳೆಯರ ವೋಟು ಪಡೆಯಬಹುದು ಎಂಬ ಕಾಲ ಬದಲಾಗಿದೆ. ಮಹಿಳೆಯರು ಜಾಗೃತರಾಗಿದ್ದಾರೆ. ದೇಶದಲ್ಲಿ ಅರ್ಧದಷ್ಟು ಸಂಖ್ಯೆಯಲ್ಲಿರುವ ಹೆಣ್ಣುಮಕ್ಕಳು ತಮ್ಮ ಅಧಿಕಾರ ಕಸಿದ ಕಾಂಗ್ರೆಸ್ ವಿರುದ್ಧ ದೇಶವ್ಯಾಪಿ ಕ್ರಾಂತಿ ಮಾಡಬೇಕು. ಮಹಿಳಾ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ ನಾಯಕರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಒತ್ತಾಯಿಸಿದರು.ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸಿದ ಕಾಂಗ್ರೆಸ್ ಮುಖಂಡರು ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ, ಅವರನ್ನು ಅಧಿಕಾರವಂಚಿತರನ್ನಾಗಿ ಮಾಡುವ ಸಂಚು ಮಾಡಿದ್ದಾರೆ. ರಾಹುಲ್ ಗಾಂಧಿಗೆ ಯಾವತ್ತು ಜ್ಞಾನೋದಯವಾಗುವುದೋ ಗೊತ್ತಿಲ್ಲ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಕೇವಲ 3 ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಜನ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡು ಯಶಸ್ವಿಯಾಗಿ ನಿಭಾಯಿಸುತ್ತಿರುವ ಮಹಿಳೆಯರಿಗೆ ದೇಶ ಆಳುವ ಅರ್ಹತೆ, ಸಾಮರ್ಥ್ಯವಿದೆ ಎಂಬುದು ಪ್ರಧಾನಿ ಮೋದಿಯವರಿಗೆ ಗೊತ್ತಿದೆ. ಆದರೆ ಕಾಂಗ್ರೆಸ್‌ನವರು ಮಹಿಳೆಯರನ್ನು ಕೇವಲ ಮತ ಹಾಕುವ ವೋಟ್ ಬ್ಯಾಂಕ್ ಎಂದು ಭಾವಿಸಿ, ಅವರನ್ನು ಅಧಿಕಾರದಿಂದ ದೂರ ಇರಿಸುವ ಮನಸ್ಥಿತಿ ಹೊಂದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು, ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವುದು ನಿಜವಾದ ಮಹಿಳಾ ಸಬಲೀಕರಣ. ನಾರಿಯರ ಶಕ್ತಿ ತಿಳಿಯದ ಅವರ ರಾಜಕೀಯ ಹಕ್ಕು ಕಸಿದ ರಾಹುಲ್ ಗಾಂಧಿ ನೇತೃತ್ವದ ನಾಯಕರಿಗೆ ಧಿಕ್ಕಾರ ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿದರು. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್. ಸದಾಶಿವಯ್ಯ, ನಗರ ಅಧ್ಯಕ್ಷ ಟಿ.ಕೆ. ಧನುಷ್, ಯುವ ಮೋರ್ಚಾ ಜಿಲ್ಲಾದ್ಯಕ್ಷ ನವಚೇತನ್, ಒಬಿಸಿ ಮೋರ್ಚಾ ಅಧ್ಯಕ್ಷ ಕೆ. ವೇದಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ, ಮುಖಂಡರಾದ ಬನಶಂಕರಿ ಬಾಬು, ಸತ್ಯಮಂಗಲ ಜಗದೀಶ್, ಹನುಮಂತರಾಜು, ಪ್ರೀತಂ ಜೈನ್, ನಿಸರ್ಗ ರಮೇಶ್, ಗಂಗಾಧರ್, ಅಂಜನಮೂರ್ತಿ, ರವಿ ಚೆಂಗಾವಿ, ವೆಂಕಟೇಶಾಚಾರ್, ಎ.ಸಿ. ಗಿರೀಶ್, ಆಟೋ ಯಡಿಯೂರಪ್ಪ, ರಾಧಾ ಗಂಗಾಧರ್, ಸಂಧ್ಯಾ, ರೇಣುಕಮ್ಮ, ಸಿದ್ಧೇಶ್ವರ್, ಮಂಜುನಾಥ್, ಶಂಕರ್ ಸೇರಿದಂತೆ ವಿವಿಧ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------------------------------ಫೋಟೋ : ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಮಸೂದೆ, ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ತಿರಸ್ಕರಿಸಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.
ಕೋಟ್್
- ಸುಮಿತ್ರಾದೇವಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ